Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಂಜಾಗೃತಾ ಕ್ರಮ

04:50 AM Jun 25, 2020 | Lakshmi GovindaRaj |

ನಾಗಮಂಗಲ: ಕೋವಿಡ್‌ 19 ಮಾರ್ಗಸೂಚಿಯಂತೆ ಮಕ್ಕಳಿಗೆ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮವಹಿಸುವ ಮೂಲಕ ಗುರುವಾರದಿಂದ ಜು.4ರ ವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು  ಶಾಸಕ ಸುರೇಶ್‌ ಗೌಡ ತಿಳಿಸಿದರು.

Advertisement

ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪೂರಕವಾಗಿ ನಡೆಸಿದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ 2,326 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದು, ಪಟ್ಟಣ  ವ್ಯಾಪ್ತಿಯಲ್ಲಿ 3 ಕೇಂದ್ರ ಸೇರಿದಂತೆ ತಾಲೂಕಿನ 10 ಕೇಂದ್ರಗಳಲ್ಲಿ ಪರೀಕ್ಷೆ ನಡೆಯ ಲಿದೆ. ಇದಕ್ಕೆ ಪೂರಕವಾಗಿ ಸ್ಥಾನಿಕ ಜಾಗೃತದಳವು ಪರೀಕ್ಷಾ ನೀತಿ ನಿಯಮಗಳ ಪರಿಶೀಲನೆ ನಡೆಸಲಿದೆ ಎಂದರು.

ಸಾರಿಗೆ ವ್ಯವಸ್ಥೆ: ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ತಾಲೂಕು ಜಾಗೃತದಳದ ಸದಸ್ಯರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಗ್ರಾಮೀಣ ಮಕ್ಕಳಿಗಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. 12 ಮಾರ್ಗಗಳಲ್ಲಿ 13 ಸಾರಿಗೆ ಬಸ್‌ ಮತ್ತು  ಖಾಸಗಿ ಶಿಕ್ಷಣ ಸಂಸ್ಥೆಗಳ 24 ಬಸ್‌ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯ ಪ್ರದೇಶವನ್ನುನಿಷೇಧಿಸಲಾಗಿದೆ. ಪ್ರತಿ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಶಿಕ್ಷಣಾಧಿಕಾರಿ ಜಗದೀಶ್‌ ಮಾತನಾಡಿ, ಅನಾರೋಗ್ಯ ದಿಂದ ಬಳಲುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಕೇಂದ್ರಗಳಿಗೂ ರೋಗ ನಿರೋಧಕ ದ್ರಾವಣ ಸಿಂಪಡಿಸುವ ಜೊತೆಗೆ ಮುಂಜಾಗೃತಾ ಕ್ರಮವಾಗಿ ತುರ್ತು  ವಾಹನಗಳ ವ್ಯವಸ್ಥೆ ಮಾಡಲಾಗುವುದು. ವಿದ್ಯಾರ್ಥಿ ಹಾಗೂ ಪೋಷಕರಿಗೆ ಯಾವುದೇ ಆತಂಕ ಬೇಡ ಎಂದರು. ತಹಶೀಲ್ದಾರ್‌ ಕುಂಞ ಅಹಮದ್‌, ತಾಪಂ ಇಒ ಡಾ.ಎಂ.ಆರ್‌.ಅನಂತರಾಜು, ತಾಲೂಕು ಆರೋಗ್ಯಾಧಿಕಾರಿ  ಡಾ.ಟಿ.ಎನ್‌.ಧನಂಜಯ, ಸಿಡಿಪಿಒ ರಾಜನ್‌, ಸಮಾಜ ಕಲ್ಯಾಣಾಧಿಕಾರಿ ರವಿಕುಮಾರ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next