Advertisement
ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ಇಡಲಾಗಿದೆ. ಅಧಿಕಾರಿಗಳ ಸಭೆ ನಡೆಸಿ ಠಾಣಾ ಹಂತದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬಂದಿ ನಿಯೋಜಿಸಲಾಗಿದೆ. ಇತ್ತೀಚೆಗೆ ಕೆಲವು ಕಡೆ ನಡೆದಿದ್ದ ಹಿಜಾಬ್-ಕೇಸರಿ ಶಾಲು ವಿವಾದದ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕರು, ಆಡಳಿತ ಮಂಡಳಿ ಹಾಗೂ ವಿವಿಧ ಸಂಘಟನೆಗಳು ಸಹಕರಿಸಿದ್ದರಿಂದ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆದಿರಲಿಲ್ಲ. ಅದೇ ರೀತಿ ಮುಂದೆಯೇ ಎಲ್ಲರ ಸಹಕಾರದಿಂದ ಶಾಂತಿ ಮುಂದು ವರಿಯಬೇಕಾಗಿದೆ ಎಂದು ತಿಳಿಸಿದ್ದಾರೆ.
Mangalore Muslims ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣದ ಕುರಿತು ಆಕ್ಷೇಪಾರ್ಹವಾದ ಪೋಸ್ಟ್‌ಗಳನ್ನು ಹಾಕಿ ಶಾಂತಿ ಕದಡಲು, ಕೋಮು ಗಲಭೆ ನಡೆಸಲು ಪ್ರಯತ್ನಿಸಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಗುಪ್ತಚರ ಇಲಾಖೆ ಜತೆಗೂ ಸಂವಹನ ನಡೆಸಲಾಗಿದೆ. ಇದಕ್ಕೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ. ಹುಂಬ ಧೈರ್ಯ ಬೇಡ
ಮಂಗಳೂರಿನಲ್ಲಿ ವಿವಿಧ ಸಂಘಟನೆ, ರಾಜಕೀಯ ಪಕ್ಷಗಳು, ಧಾರ್ಮಿಕ, ಜಾತಿ, ರಾಜಕೀಯ ಮುಖಂಡರು, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆ ಹಾಗೂ ಕೆಲವು ವ್ಯಕ್ತಿಗಳು ನೀಡುತ್ತಿರುವ ಹೇಳಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಪೋಸ್ಟ್‌ಗಳನ್ನು ನಿರಂತರವಾಗಿ ನಿಕಟವಾಗಿ ಗಮನಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಮೂಲಕ ವಿಷಬೀಜ ಬಿತ್ತಲು ಅವಕಾಶ ನೀಡುವುದಿಲ್ಲ. ಇಂತಹ ಸುಮಾರು 1,064 ವ್ಯಕ್ತಿ/ಸಂಘಟನೆಗಳ ಪೋಸ್ಟ್‌ಗಳ ಬಗ್ಗೆ ಕಳೆದ 2 ತಿಂಗಳುಗಳಿಂದ ನಿಗಾ ಇರಿಸಲಾಗಿದೆ. ಇದನ್ನು ಪರಿಶೀಲಿಸಲಾಗುತ್ತಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಯ ವಿವಿಧ ಏಜೆನ್ಸಿಗಳಿಗೂ ಮಾಹಿತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್‌ಗಳನ್ನು ಗಂಭೀರವಾಗಿ ಪರಿಗಣಿಸ ಲಾಗುತ್ತಿದೆ. ಹಾಗಾಗಿ ಯಾರೂ ಕೂಡ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಬಾರದು. ಕೇವಲ ಪೋಸ್ಟ್ ಮಾಡುವುದು ಮಾತ್ರವಲ್ಲದೆ ಅದನ್ನು ಶೇರ್ ಮಾಡುವುದು, ಲೈಕ್ ಮಾಡುವುದು ಅಥವಾ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕುವುದು ಕೂಡ ಅಪರಾಧವಾಗುತ್ತದೆ ಎಂದು ಅವರು ತಿಳಿಸಿದರು.
Related Articles
Advertisement
ಪೊಲೀಸ್ ಪಥಸಂಚಲನಮಂಗಳೂರು ನಗರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಮುಂದುವರಿಸಿ ಕೊಂಡು ಹೋಗುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಪೊಲೀಸರು ಸೋಮವಾರ ಬೆಳಗ್ಗೆ ಪಥಸಂಚಲನ ನಡೆಸಿದರು. ಅಂತೆಯೇ ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕ ಸುದೀಪ್ ನೇತೃತ್ವದಲ್ಲಿ ಪೊಲೀಸರು ಪೇಟೆಯಲ್ಲಿ ಪಥ ಸಂಚಲನ ನಡೆಸಿದರು. ಉಡುಪಿಯಲ್ಲೂ ಕಟ್ಟೆಚ್ಚರ
ಉಡುಪಿ ಜಿಲ್ಲೆಯ ಪೊಲೀಸರಿಗೆ ರವಿವಾರ ರಾತ್ರಿಯಿಂದಲೇ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಿದ್ದೇವೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌ಗಳು, ಎಸ್‌ಐ ಹಾಗೂ ಸಿಬಂದಿ ವರ್ಗಕ್ಕೆ ಅಹಿತಕರ ಘಟನೆ ನಡೆಯದಂತೆ ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ.
– ಎನ್. ವಿಷ್ಣುವರ್ಧನ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ