Advertisement
ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಸರಕಾರ ಗುಡುಗು ಸಿಡಿಲಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಸಿಡಿಲು ಆ್ಯಪ್ ಅಭಿವೃದ್ಧಿ ಪಡಿಸುವುದರೊಂದಿಗೆ ಸ್ಥಳೀಯ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಆಗುವ ಬಗ್ಗೆ ನಿಖರ ಮಾಹಿತಿಯನ್ನು ಒದಗಿಸುತ್ತಿದೆ. ಇದರ ಸದುಪಯೋಗಪಡಿಸಿಕೊಳ್ಳುವುದರೊಂದಿಗೆ ರಕ್ಷಣೆ ಪಡೆಯಬೇಕು ಎಂದರು.
ಅರಿವು ಮೂಡಿಸಿ
ಶಾಲೆಯ ಪ್ರಾರಂಭದ ದಿನಗಳಲ್ಲಿಯೇ ಪ್ರಕೃತಿ ವಿಕೋಪ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಅವುಗಳನ್ನು ತಮ್ಮ ನೆರೆ ಹೊರೆ ಹಾಗೂ ಕುಟುಂಬದವರೊಂದಿಗೆ ಹಂಚಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸೂಕ್ತ ತರಬೇತಿ
ಆರೋಗ್ಯ ಇಲಾಖೆಯವರು ಪ್ರಕೃತಿ ವಿಕೋಪದಿಂದ ತೊಂದರೆಗೊಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡುವ ಕುರಿತು ಪ್ರಾಯೋಗಿಕ ತರಬೇತಿಗಳನ್ನು ಸಂಘ-ಸಂಸ್ಥೆಯವರಿಗೆ, ಆಶಾ ಕಾರ್ಯಕರ್ತೆಯರಿಗೆ ನೀಡಿ ಅವರ ಮೂಲಕ ಇತರ ಸಾರ್ವಜನಿಕರಿಗೆ ತಲುಪಿಸುವ ಕೆಲಸವಾಗಬೇಕು. ಇವುಗಳಿಂದ ತೊಂದರೆ ಉಂಟಾದವರಿಗೆ ಚಿಕಿತ್ಸೆ ನೀಡಲು ಎಲ್ಲ ರೀತಿಯ ಔಷಧಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಘಟನೆ ಸಂಭವಿಸಿದರೆ ತತ್‌ಕ್ಷಣ ಸಮೀಪದ 108 ಗೆ ಮಾಹಿತಿ ನೀಡುವುದು ಉತ್ತಮ ಎಂದರು.
ಮೆಸ್ಕಾಂ, ಅರಣ್ಯ ಇಲಾಖೆಗೆ ಸೂಚನೆ
ಮೆಸ್ಕಾಂ ಇಲಾಖೆಯವರು ಜೋರಾದ ಮಳೆ, ಗಾಳಿ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದರ ಜತೆಗೆ ಯಾವುದೇ ರೀತಿಯ ವಿದ್ಯುತ್ ಅವಘಡಗಳು ಆಗದಂತೆ ಎಚ್ಚರವಹಿಸಬೇಕು. ರಸ್ತೆ ಬದಿಯಲ್ಲಿ ಅಸುರಕ್ಷಿತ ಮರಗಳಿದ್ದಲ್ಲಿ ಅವುಗಳನ್ನು ತೆರವುಗೊಳಿಸುವ ಕಾರ್ಯ ಶೀಘ್ರದಲ್ಲಿ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಂದಾಪುರ ಡಿಎಫ್ಒ ಆಶೀಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ವೀಣಾ, ಉಪವಿಭಾಗಾಧಿಕಾರಿ ರಾಜು, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.