Advertisement

ಆತ್ಮವಿಶ್ವಾಸದಿಂದ ಭವಿಷ್ಯ ರೂಪಿಸಿಕೊಳ್ಳಿ: ಪುಷ್ಪಲತಾ

05:41 PM Jan 13, 2022 | Team Udayavani |

ಧಾರವಾಡ: ಯುವ ಸಮುದಾಯ ತಮ್ಮ ಭವಿಷ್ಯವನ್ನು ಆತ್ಮವಿಶ್ವಾಸದಿಂದ ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಜಿಲ್ಲಾ
ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತಾ ಸಿ.ಎಂ. ಹೇಳಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ನೆಹರು ಯುವ ಕೇಂದ್ರ, ಕವಿವಿ ಎನ್‌ಎಸ್‌ಎಸ್‌ ಕೋಶ, ಧಾರವಾಡ ವಕೀಲರ ಸಂಘ, ಸ್ವಾಮಿ ವಿವೇಕಾನಂದ ಯುತ್‌ ಮೂವ್‌ಮೆಂಟ್‌ ಸಹಯೋಗದಲ್ಲಿ ನಗರದ ಕಿಟೆಲ್‌ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ, ರಾಷ್ಟ್ರೀಯ ಯುವ ಸಪ್ತಾಹ ಹಾಗೂ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಪಡೆಯುವ ಈ ಸುವರ್ಣ ದಿನಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದ ಗಣ್ಯರ ಸಾಲಿನಲ್ಲಿ ನಿಲ್ಲುವ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು. ಕವಿವಿ ಮೌಲ್ಯಮಾಪನ ಕುಲಸಚಿವ ಪ್ರೊ|ಎಚ್‌. ನಾಗರಾಜ ಮಾತನಾಡಿ, ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಸದಾ ಪಾಲಿಸಬೇಕು. ಅಧ್ಯಯನಶೀಲರಾಗಿ ಯಶಸ್ಸು ಸಾಧಿಸಬಹುದು ಎಂದರು.

ಎಸಿ ಡಾ|ಬಿ.ಗೋಪಾಲಕೃಷ್ಣ ಮಾತನಾಡಿ, ಸ್ವಾಮಿ ವಿವೇಕಾನಂದರು ಹೇಳಿದಂತೆ ನಾವು ಏನಾಗಬೇಕು ಎಂದುಕೊಳ್ಳುತ್ತೇವೆಯೋ ಅದನ್ನು ಸ್ಪಷ್ಟವಾಗಿ ಗುರುತಿಸಿಕೊಂಡು ಆ ನಿಟ್ಟಿನಲ್ಲಿ ವಿಶ್ವಾಸದಿಂದ ಸಾಗಬೇಕು ಎಂದರು.

ಧಾರವಾಡ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್‌. ಪೊಲೀಸ್‌ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಅವಕಾಶ, ಜ್ಞಾನ ಸಂಪನ್ಮೂಲಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

Advertisement

ಪ್ರಾಚಾರ್ಯರಾದ ಡಾ|ರೇಖಾ ಎಂ. ಜೋಗುಳ ಅಧ್ಯಕ್ಷತೆ ವಹಿಸಿದ್ದರು. ಡಾ|ರಾಜು ಜಿ.ಅವರ ಶಿಕ್ಷಣಶಾಸ್ತ್ರ ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ಸ್ವಾಮಿ ವಿವೇಕಾನಂದ ಯುತ್‌ ಮೂವ್‌ಮೆಂಟ್‌ ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕ ಅನಿಲ ಜೋಷಿ ವಿಶೇಷ ಉಪನ್ಯಾಸ ನೀಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎ.ಎ.ಖಾಜಿ, ಜಿಲ್ಲಾ ವಾರ್ತಾಧಿ ಕಾರಿ ಮಂಜುನಾಥ ಡೊಳ್ಳಿನ, ನೆಹರು ಯುವ ಕೇಂದ್ರದ ಯುವ ಸಮನ್ವಯಾ ಧಿಕಾರಿ ಗೌತಮ ರೆಡ್ಡಿ ಇದ್ದರು.

ಕವಿವಿ ಎನ್‌ಎಸ್‌ಎಸ್‌ ಕೋಶದ ನೋಡಲ್‌ ಅಧಿಕಾರಿ ಡಾ|ಎಂ.ಬಿ. ದಳಪತಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಡಾ|ವಿ.ಐ.ಶೇಖ್‌ ನಿರೂಪಿಸಿದರು. ಡಾ|ಸುರೇಶ ನ್ಯಾಮತಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next