Advertisement

ಕುಡಿಯುವ ನೀರು ಪೂರೈಸಲು ಆದ್ಯತೆ

01:29 PM Jun 02, 2017 | Team Udayavani |

ಹೊನ್ನಾಳಿ: ಪಟ್ಟಣದ ಎಲ್ಲಾ ವಾರ್ಡ್‌ಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಆದ್ಯತೆ ನೀಡಲಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ಇಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದ ಬಳಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಯಡಿ ನಿರ್ಮಿಸಿರುವ ಜಲ ಸಂಗ್ರಹಾಗಾರ, ನೀರು ವಿತರಣಾ ಕೊಳವೆ ಲೋಕಾರ್ಪಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 

Advertisement

ಸಮುದಾಯದ ಆರೋಗ್ಯದ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆಗೆ ಸರಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ಹೊನ್ನಾಳಿಯಲ್ಲಿ ಇದೀಗ 3.25 ಕೋಟಿ ರೂ.ಗಳ ವೆಚ್ಚದಲ್ಲಿ 5 ಲಕ್ಷ ಲೀ. ಸಾಮರ್ಥ್ಯದ 15 ಮೀ. ಎತ್ತರದ ಮೇಲ್ಮಟ್ಟದ ಜಲಸಂಗ್ರಹಾಗಾರ, ಇದಕ್ಕೆ ಸಂಬಂಧಪಟ್ಟ 5,597 ಮೀ. ಉದ್ದದ ಏರು ಕೊಳವೆ, ವಿತರಣಾ ಕೊಳವೆ ಕಾಮಗಾರಿ ಪೂರ್ಣಗೊಳಿಸಲಾಗಿದೆ.

ಎರಡು ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗಲಿದೆ ಎಂದು ತಿಳಿಸಿದರು. ಒಳಚರಂಡಿ ಯೋಜನೆ ಕಾಮಗಾರಿಯ ಪರಿಣಾಮ ಪಟ್ಟಣದ ವಿವಿಧ ವಾರ್ಡ್‌ಗಳ ರಸ್ತೆಗಳು ತೀವ್ರ ಹದಗೆಟ್ಟದ್ದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿತ್ತು.

ಆದ್ದರಿಂದ ಸರಕಾರದ ಮೇಲೆ ಒತ್ತಡ ಹೇರಿ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆ ಮಾಡಿಸಿಕೊಳ್ಳಲಾಗಿದೆ. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ 2 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗಿದೆ.

ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ಹಾಗೂ ಎಸ್‌ ಎಫ್‌ಸಿ ಅನುದಾನದಲ್ಲಿ 3 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಎಸ್‌ಸಿ-ಎಸ್‌ಟಿ ಅನುದಾನದಡಿ 3 ಕೋಟಿ ರೂ. ಗಳ ವೆಚ್ಚದ ಕಾಮಗಾರಿ ಟೆಂಡರ್‌ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭವಾಗಲಿದೆ. 

Advertisement

2 ಕೋಟಿ ವೆಚ್ಚದಲ್ಲಿ ನಗರೋತ್ಥಾನ ಯೋಜನೆಯ 3ನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ಟೆಂಡರ್‌ ಹಂತದಲ್ಲಿದೆ ಎಂದು ವಿವರಿಸಿದರು. ಪಟ್ಟಣದ ರಸ್ತೆಗಳೂ ಸೇರಿದಂತೆ ತಾಲೂಕಿನ ಬಹುತೇಕ ಎಲ್ಲಾ ಹಳ್ಳಿಗಳಲ್ಲೂ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡಲಾಗಿದೆ. ತಾಲೂಕಿನ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಅನುದಾನ ತಂದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತಂದು ಮತದಾರರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಪಪಂ ಉಪಾಧ್ಯಕ್ಷೆ ಎಚ್‌.ಬಿ. ವೀಣಾ, ಸದಸ್ಯರಾದ ಎಚ್‌ .ಡಿ. ವಿಜೇಂದ್ರಪ್ಪ, ಎಚ್‌.ಬಿ. ಅಣ್ಣಪ್ಪ, ಸುಶೀಲಮ್ಮ, ವಿಜಯಮ್ಮ, ಮಾಲೀಗೌಡ, ಪೇಟೆ ಪ್ರಶಾಂತ್‌, ಹೊಸಕೇರಿ ಸುರೇಶ್‌, ಮುಖ್ಯಾಧಿಕಾರಿ ಎಸ್‌. ಆರ್‌. ವೀರಭದ್ರಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಧರ್ಮಪ್ಪ, ಎಇಇ ಟಿ.ಕೆ. ಅಚ್ಯುತಾನಂದ, ಕೆ.ಆರ್‌. ಮಣಿಕಂಠ, ಕೆ. ಹನುಮಂತಪ್ಪ, ಇರ್ಷಾದ್‌, ಬಾಬು ಮತ್ತಿತರರಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next