Advertisement
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ಬರ ನಿರ್ವಹಣೆ ಹಾಗೂ ಮುಂಗಾರು ಹಂಗಾಮಿನ ಸಿದ್ಧತೆಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಅವರು, ತೀವ್ರವಾಗಿ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕೆಂದು ಸೂಚನೆ ನೀಡಿದರು.
Related Articles
Advertisement
ಹಾಸನ ನಗರದ ಕುಡಿಯುವ ನೀರು ಪೂರೈಕೆಯ 3ನೇ ಹಂತದ ಯೋಜನೆಯಾದ ಅಮೃತ್ ಯೋಜ ನೆಯ ಕಾಮಗಾರಿಯನ್ನು ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಬೇಕು. ನಗರದಲ್ಲಿ ಲೋಕೋಪ ಯೋಗಿ ಇಲಾಖೆ ಮೂಲಕ ಕಾಂಕ್ರೀಟ್ ರಸ್ತೆ ಕಾಮ ಗಾರಿಗಳು ನಡೆಯುತ್ತಿದ್ದು, ಈಗಲೇ ಪೈಪ್‌ಲೈನ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ ಎಂದು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಲೂಗಡ್ಡೆ ಬಿತ್ತನೆ ಬೀಜ, ಸಬ್ಸಿಡಿ ಅರ್ಹರಿಗೆ ತಲಪಲಿ: ಆಲೂಗೆಡ್ಡೆ ಬಿತ್ತನೆ ಬೀಜ ವಿತರಣೆಯಲ್ಲಿ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಾರಾಟ ದರ ನ್ಯಾಯಯುತವಾಗಿ ನಿಗದಿಯಾಗಬೇಕು. ಶೇ.50ರಷ್ಟು ಸಬ್ಸಿಡಿ ಮೊತ್ತ ರೈತರಿಗೆ ನೇರವಾಗಿ ಜಮೆಯಾಗಬೇಕು. ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ಬಿತ್ತನೆ ಬೀಜ, ಔಷಧಿಗಳು ವಿತರಣೆಯಾಗಬೇಕು. ಮಾರಾಟಗಾರರು ರೈತರಿಗೆ ಬಿಲ್ಲುಗಳನ್ನು ನೀಡಬೇಕು. ಗ್ರಾಮ ಲೆಕ್ಕಿಗಳು ಆಲೂಗೆಡ್ಡೆ ಬಿತ್ತನೆ ಮಾಡಿರುವ ಬಗ್ಗೆ ದೃಢೀಕರಣ ನೀಡಬೇಕು. ಜಿಲ್ಲಾಧಿಕಾರಿಯವರ ಮಾರ್ಗದರ್ಶನ ದಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ರೈತರ ಹಿತ ಕಾಯಬೇಕು. ಎಂದು ಸಚಿವರು, ಮುಂಗಾರು ಪ್ರಾರಂಭವಾಗುತ್ತಿದ್ದು ಬಿತ್ತನೆಬೀಜ, ರಸಗೊಬ್ಬರ ಸಾಕಷ್ಟು ದಾಸ್ತಾನು ಮಾಡಿದ್ದು ಕೃಷಿಕರಿಗೆ ಅಗತ್ಯವಿದ್ದಾಗ ವಿತರಣೆ ಮಾಡಲು ಜಂಟಿ ಕೃಷಿನಿರ್ದೇಶಕರು ಜವಾಬ್ದಾರಿ ವಹಿಸ ಬೇಕು ಎಂದು ತಾಕೀತು ಮಾಡಿದರು.
ಅತಿವೃಷ್ಟಿ ಹಾನಿ ಪರಿಹಾರ ಕಾರ್ಯ ಪೂರ್ಣಗೊಳಿಸಿ: ಕಳೆದ ಮುಂಗಾರು ಅವಧಿಯಲ್ಲಿ ಮಲೆನಾಡು ಪ್ರದೇಶದಲ್ಲಿ ಸಾಕಷ್ಟು ರಸ್ತೆಗಳು ಹಾನಿಗೀಡಾಗಿದ್ದು, ಪರಿಹಾರ ಕಾರ್ಯಗಳಿಗೆ ಅನುದಾನ ಒದಗಿಸಲಾಗಿದೆ. ಎಲ್ಲಾ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು. ಸಕಲೇಶಪುರ-ಮಾಗೇರಿ, ಸೋಮವಾರಪೇಟೆ ರಸ್ತೆ ಪುನರ್ ನಿರ್ಮಾಣವಾಗಬೇಕು. ಮಳೆ ಪ್ರಾರಂಭ ವಾಗುವ ಮುನ್ನ ಅಪಾಯಕಾರಿಯಾಗಿರುವ ಮಾರ್ಗ ಗಳನ್ನು ಸರಿಪಡಿಸಬೇಕು ಎಂದು ಸಚಿವರು ಲೋಕೋಪಯೋಗಿ ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರುಗಳಿಗೆ ಸೂಚನೆ ನೀಡಿದರು.
ಶಾಲಾ ಕಟ್ಟದ ದುರಸ್ತಿ ಮಾಡಿ: ಮುಂಗಾರು ಪ್ರಾರಂಭವಾಗಲಿದ್ದು ಶಾಲಾ ಕಾಲೇಜುಗಳ ಸುಸ್ಥಿತಿ ಗಮನಿಸಿ ಮಕ್ಕಳಿಗೆ ಯಾವುದೇ ಅಪಾಯವಾಗದಂತೆ ಮುಂಜಾಗ್ರತೆ ವಹಿಸಿ ತುರ್ತು ದುರಸ್ತಿ ಅಗತ್ಯವಿರುವ ಕಟ್ಟಡಗಳನ್ನು ಪಟ್ಟಿಮಾಡಿ ತಕ್ಷಣವೇ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದಪೂರ್ವ ಶಿಕ್ಷಣ ಇಲಾಖೆಗಳ ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಿದರು.
ಎಲ್ಲಾ ತಾಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನ ದಲ್ಲಿರಬೇಕು. ಎಲ್ಲರೂ ಕರ್ತವ್ಯದ ಸಂಬಂಧ ಎಲ್ಲಾ ಸಂದರ್ಭದಲ್ಲಿ ಲಭ್ಯವಾಗುವಂತಾಹ ಸಾರ್ವಜನಿ ಕರಿಂದ ಯಾವುದೇ ರೀತಿಯ ದೂರುಗಳು ಬರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ ವಸುವ ಅಧಿಕಾರಿ, ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿ ಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಕೆ ನೀಡಿದರು.
ಮೇವಿನ ವ್ಯವಸ್ಥೆ ಮಾಡಿ: ಜಿಲ್ಲೆಯಲ್ಲಿ ದನಕರುಗಳ ಮೇವಿನ ಕೊರತೆಯಾಗದಂತೆ ಮುಂಜಾಗ್ರತೆ ವಹಿಸ ಬೇಕು. ಪಶು ಪಾಲನಾ ಇಲಾಖೆ ಹಾಗೂ ಹಾಸನ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಹಾಲು ಉತ್ಪಾದನೆಗೆ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ವಿತರಿಸಿ ಮೇವು ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದೂ ಅಧಿಕಾರಿಗಳಿಗೆ ಸಚಿವ ಎಚ್.ಡಿ. ರೇವಣ್ಣ ಅವರು ತಾಕೀತು ಮಾಡಿದರು.
26 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯವರು ಜಿಲ್ಲೆಯಲ್ಲಿನ ಬರ ಹಾಗೂ ಕುಡಿಯುವ ನೀರಿನ ಬಗ್ಗೆ ಪೂರೈಕೆ ಬಗ್ಗೆ ವಿವರಿಸಿದರು.
ಜಿಲ್ಲೆಯ 26 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಪ್ರತಿದಿನ 76 ಟ್ರಿಪ್ ನೀರು ಪೂರೈಸಲಾಗುತ್ತಿದೆ. 37 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾಳನ್ನು ಬಳಸಿ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.
ಜಿಪಂ ಎಂಜಿನಿಯರಿಂಗ್ ವಿಭಾಗದ ಇಇ ಆನಂದ್ ಅವರು ಮೊದಲ ಮತ್ತು 2ನೇ ಹಂತದ ನೀರು ಪೂರೈಕೆ ಕಾಮಗಾರಿಗಳು ಮುಕ್ತಾಯ ಹಂತದಲ್ಲಿದ್ದು 3ನೇ ಹಂತದ ಕಾಮಗಾರಿಗಳು ಶೀಘ್ರ ಪ್ರಾರಂಭವಾಗಲಿದೆ ಎಂದರು.