Advertisement

ಸೋಂಕು ಹೆಚ್ಚಿರುವಕಡೆ ಲಸಿಕೆಗೆ ಆದ್ಯತೆ

04:42 PM Aug 24, 2021 | Team Udayavani |

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿನ ಪ್ರಮಾಣ ಹೆಚ್ಚಿರುವ ಪ್ರದೇಶಗಳಲ್ಲಿನ ಜನರಿಗೆ ಮೊದಲ ಆದ್ಯತೆಯಾಗಿ ಮೊದಲ ಹಾಗೂ
2ನೇ ಡೋಸ್‌ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋವಿಡ್‌-19 ಸಂಬಂಧ ಜರುಗಿದ ಸಭೆಯಲ್ಲಿ
ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಗೃತಿ ಮೂಡಿಸಿ: ಸೋಂಕಿನ ನಿಯಂತ್ರಣಕ್ಕಾಗಿ ಲಸಿಕಾಕರಣ ಅಭಿಯಾನವನ್ನು ಎಲ್ಲಾ ತಾಲೂಕುಗಳಲ್ಲಿಯೂ ಯಶಸ್ವಿಗೊಳಿಸಬೇಕು. ಲಸಿಕೆ ಕುರಿತು ಜಾಗೃತಿ ಮೂಡಿಸುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಲಸಿಕಾರಣ ಕಾರ್ಯ ಮಾಡಬೇಕೆಂದರು.

ಪಾವಗಡ ತಾಲೂಕಿನಲ್ಲಿ ಮಾದರಿ ಯೋಜನೆ ರೂಪಿಸಿ ಒಂದೊಂದು ದಿನ ಒಂದೊಂದು ಗ್ರಾಪಂ ವ್ಯಾಪ್ತಿಯಲ್ಲಿ ಸಂಪೂರ್ಣ ಲಸಿಕೆ ನೀಡಬೇಕು.
ಲಸಿಕೆ ನೀಡುವ ಮುನ್ನ ಗ್ರಾಪಂನಲ್ಲಿ ಡಂಗೂರ ಸಾರಬೇಕು ಎಂದು ತಹಶೀಲ್ದಾರ್‌, ಇಒ, ತಾ. ಆರೋಗ್ಯಾಧಿಕಾರಿಗಳಿಗೆ ಸಲಹೆ ನೀಡಿದರು.
ಎಲ್ಲಾ ತಾಲೂಕುಗಳಲ್ಲಿಯೂ ನಿಗದಿತ ಗುರಿಯಂತೆ ಕೋವಿಡ್‌ ಪರೀಕ್ಷೆ ನಡೆಸಬೇಕು.

ಇದನ್ನೂ ಓದಿ:ಎಲ್ಐಸಿ ‘ವಿಶೇಷ ನವೀಕರಣ ಅಭಿಯಾನ’ದ ಬಗ್ಗೆ ನಿಮಗೆ ತಿಳಿದಿದೆಯೆ..? ಇಲ್ಲಿದೆ ಮಾಹಿತಿ

Advertisement

ಸೋಂಕಿತರನ್ನು ಕಡ್ಡಾಯವಾಗಿ ಹೋಂ ಐಸೋಲೇಷನ್‌ ಅಥವಾ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿಟ್ಟು ಚಿಕಿತ್ಸೆ ನೀಡಬೇಕೆಂದರು. ಬೆಳೆ ಸಮೀಕ್ಷೆಗೆ ಹೆಚ್ಚು ಪ್ರಚಾರ: ಬೆಳೆ ಸಮೀಕ್ಷೆ ಆ್ಯಪ್‌ ಮೂಲಕ ರೈತರು ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಬಗ್ಗೆ ಎಲ್ಲಾ ತಹಶೀಲ್ದಾರ್‌, ಕೃಷಿ ಇಲಾಖೆಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು ಹೆಚ್ಚಿನ ಪ್ರಚಾರ ಮಾಡಿ ಬೆಳೆ ಸಮೀಕ್ಷೆ ಕೈಗೊಳ್ಳಲು ರೈತರಿಗೆ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.

ಇದೇ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಮಾತನಾಡಿ, ಈ ಬಾರಿಶೇ.50 ಬೆಳೆ ಸಮೀಕ್ಷೆ ಪ್ರಗತಿ ರೈತರಿಂದಲೇ
ಆಗಬೇಕಿದೆ. ಹೀಗಾಗಿ ರೈತರಿಗೆ ಹೆಚ್ಚು ಅರಿವು ಮೂಡಿಸಿ ರೈತರೇ ಬೆಳೆ ಸಮೀಕ್ಷೆಕೈಗೊಳ್ಳಲುಕ್ರಮ ವಹಿಸಬೇಕೆಂದರು.

ಸಮರ್ಪಕವಾಗಿ ಅನುಷ್ಠಾನಕ್ಕೆ ತನ್ನಿ: ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಸಂಭಾವ್ಯ 3ನೇ ಅಲೆ ತಡೆಗಾಗಿ ಸರ್ಕಾರ ಆರೋಗ್ಯ ನಂದನ್‌ ಕಾರ್ಯಕ್ರಮ ರೂಪಿಸಿದ್ದು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು. ಶಾಲೆಗೆ ಆಗಮಿಸುವ ಮಕ್ಕಳಿಗೆ ತಪಾಸಣೆ, ಮಕ್ಕಳಿಗೆ ಪೌಷ್ಟಿಕಾಂಶ ಆಹಾರ, ಶಾಲೆಗೆ ತೆರಳುವ ಪೋಷಕರಿಗೆ ಲಸಿಕೆ ನೀಡಲು ಕ್ರಮವಹಿಸಬೇಕು. ಆರೋಗ್ಯಾಧಿಕಾರಿ, ಇಒ, ಶಿಕ್ಷಣಾಧಿಕಾರಿ ಹಾಗೂ
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸಿ ಗೊಳಿಸಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಾಪುರವಾಡ್‌,ಅಪರಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್‌,ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next