ದೇವನಹಳ್ಳಿ: ತಾಲೂಕಿನಲ್ಲಿ ಬರಗಾಲ ಆವರಿಸಿದ್ದು, ಬೇಸಿಗೆ ಸಮೀಪಿಸುತ್ತಿದ್ದಂತೆ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಶಾಸಕ ನಿಸರ್ಗ ಎಲ್.ಎನ್.ನಾರಾಯಣ ಸ್ವಾಮಿ ಹೇಳಿದರು.
ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಂಡಿದ್ದ ಬೋರ್‌ವೆಲ್ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆಗೆ ಈಗಾಗಲೇ ಸರ್ಕಾರ 1.50 ಕೋಟಿ ರೂ. ಬಿಡುಗಡೆ ಮಾಡಿದೆ. ನೀರಿನ ಸಮಸ್ಯೆ ಇದ್ದಲ್ಲಿ ಕೊಳವೆ ಬಾವಿ ಕೊರೆಸುವುದು, ಟ್ಯಾಂಕರ್ ಮುಖಾಂತರ ಹಾಗೂ ಖಾಸಗಿ ಬೋರ್‌ವೆಲ್‌ಗಳಿಂದಾದರೂ ನೀರು ಪೂರೈಸಲಾಗುವುದು. ಜತೆಗೆ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದರು.
1,500 ಅಡಿ ಆಳ ಬೋರ್‌ವೆಲ್ ಕೊರೆಸಿದರೂ ನೀರು ಸಿಗದ ಪರಿಸ್ಥಿತಿಯಿದೆ. ಅದರಲ್ಲೂ ಉತ್ತಮ ನೀರು ಸಿಕ್ಕಿರುವುದರಿಂದ ಸಂತಸವಾಗಿದೆ. ಗ್ರಾಮಸ್ಥರು ನೀರನ್ನು ಮಿತವಾಗಿ ಬಳಸಬೇಕು. ಗ್ರಾಮದಲ್ಲಿ ಏನೇ ಸಮಸ್ಯೆಯಾದರೂ ನಾನು ನಿಮ್ಮ ಜೊತೆ ಇರುತ್ತೇನೆ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷ ರಾಮಮೂರ್ತಿ ಮಾತನಾಡಿ, ಸುಮಾರು 1,514 ಅಡಿ ಬೋರ್‌ವೆಲ್ ಕೊರೆಸಲಾಗಿದ್ದು, ಸ್ವಲ್ಪ ಪ್ರಮಾಣದ ನೀರು ಕಾಣಿಸಿಕೊಂಡಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮ ಸ್ಯೆ ಇರಲ್ಲ. ಇದೇ ರೀತಿ ಸಮಸ್ಯೆ ಇರುವ ಕಡೆಗಳಲ್ಲಿ ಬೋರ್‌ವೆಲ್ ಕೊರೆಸಲಾ ಗುವುದು. ಗ್ರಾಮೀಣ ನೀರು ಸರಬ ರಾಜು ಇಲಾಖೆ ಮತ್ತು ಶಾಸಕರ ಅನು ದಾನದಲ್ಲಿ ವಿಶ್ವನಾಥಪುರ ಗ್ರಾಪಂ ವ್ಯಾಪ್ತಿ ಗೆ ಸೇರಿದ ಬೊಮ್ಮವಾರದ ಬಳಿ ಬೋರ್‌ವೆಲ್ ಕೊರೆಸಲಾಗಿದೆ ಎಂದರು