Advertisement

ಚೆಕ್‌ ಡ್ಯಾಂ ನಿರ್ಮಾಣಕ್ಕೆ ಆದ್ಯತೆ

04:14 PM Feb 19, 2020 | Suhan S |

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹಾಗೂ ನೀರಿನ ಬವಣೆ ನೀಗಿಸುವ ಸಲುವಾಗಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡಿ ಕೆಲಸ ಮಾಡಿದ್ದೇನೆ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು.

Advertisement

ತಾಲೂಕಿನ ಸಂಗಾಪುರ ಗ್ರಾಮದ ಹೊರವಲಯದ ಲೋಕಪಾವನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸುಮಾರು 1.40 ಕೋಟಿ ರೂ. ವೆಚ್ಚದ ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ mನೆರವೇರಿಸಿ ಮಾತನಾಡಿದರು. ನಾನು ಸಮ್ಮಿಶ್ರ ಸರ್ಕಾರದಲ್ಲಿ ಸಚಿವನಾಗಿದ್ದಾಗ ದುದ್ದ ಹಾಗೂ ಮೇಲುಕೋಟೆ ಹೋಬಳಿ ವ್ಯಾಪ್ತಿಗಳಲ್ಲಿ ಹೆಚ್ಚು ಚೆಕ್‌ ಡ್ಯಾಂಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಚೆಕ್‌ ಡ್ಯಾಂಗಳನ್ನು ಹೆಚ್ಚು ನಿರ್ಮಾಣ ಮಾಡುವುದರಿಂದ ಭೂಮಿಯಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗಿ ಕೃಷಿ ಪಂಪ್‌ಸೆಟ್‌ಗಳ ನೀರಿನ ಮಟ್ಟವು ಚೇತರಿಕೆ ಯಾಗುವುದರಿಂದ ಹೆಚ್ಚು ಚೆಕ್‌ ಡ್ಯಾಂಗಳನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗಿತ್ತು ಎಂದರು.

ಅದೇ ರೀತಿ ತಾಲೂಕಿನ ಸಂಗಾಪುರ ಗ್ರಾಮದ ಬಳಿ ನಾಗಮಂಗಲ ಕಡೆಯಿಂದ ದಕ್ಷಿಣಾಭಿಮುಖವಾಗಿ ಹರಿಯುವ ಲೋಕಪಾವನಿ ನದಿಗೆ ಅಡ್ಡಲಾಗಿ ಚೆಕ್‌ ಡ್ಯಾಂ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 1.40 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಸಲಾಗಿದ್ದು, ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಚೆಕ್‌ ಡ್ಯಾಂ ನಿರ್ಮಾಣದ ಕಾಮಗಾರಿಯನ್ನು ಗುತ್ತಿಗೆ  ಪಡೆದುಕೊಂಡಿರುವ ಗುತ್ತಿಗೆದಾರರು ಗುಣ ಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಮನ್‌ಮುಲ್‌ ನಿರ್ದೇಶಕ ಕೆ.ರಾಮಚಂದ್ರು, ಗ್ರಾಪಂ ಅಧ್ಯಕ್ಷ ಯೋಗರಾಜು, ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಜೆ.ಪಿ.ಶಿವಶಂಕರ್‌, ಉಪಾಧ್ಯಕ್ಷ ಧರ್ಮರಾಜು, ಗ್ರಾಪಂ ಸದಸ್ಯ ಪ್ರಕಾಶ್‌, ಜೆಡಿಎಸ್‌ ಮುಖಂಡರಾದ ಆನಂದ್‌, ಬೆಟ್ಟಸ್ವಾಮಿಗೌಡ, ಸತೀಶ್‌, ನಿತ್ಯಾನಂದ, ಜಯಚಂದ್ರ, ದಿವಾಕರ, ಜವರೇಗೌಡ, ಸಣ್ಣನೀರಾವರಿ ಇಲಾಖೆ ಎಇಇ ಶ್ರೀನಿವಾಸಲು, ಎಇ ಸುಹಾಸ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next