Advertisement

ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ: ನಳಿನ್ ಕುಮಾರ್ ಕಟೀಲ್

01:36 AM Jan 10, 2022 | Team Udayavani |

ಮಂಗಳೂರು: ಪರಿಸರ ವನ್ನು ಸಂರಕ್ಷಿಸುವ ಪರಿ ಸರ ಪ್ರವಾಸೋದ್ಯಮಕ್ಕೆ ದ.ಕ. ಜಿಲ್ಲೆಯಲ್ಲಿ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳ ಲಾಗುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ತಣ್ಣೀರುಬಾವಿಯ ಅರಣ್ಯ ಇಲಾಖೆಯಲ್ಲಿ ಜನಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿ ಗಳೊಂದಿಗೆ ರವಿವಾರ ಸಭೆ ನಡೆಸಿ ಅವರು ಮಾತನಾಡಿದರು.

ಸಸಿಹಿತ್ಲು ಹಾಗೂ ತಣ್ಣೀರುಬಾವಿ ಕಡಲ ತೀರಗಳಲ್ಲಿ ಮೂಲ ಸೌಕರ್ಯ  ಅಭಿವೃದ್ಧಿಗೆ ಅಗತ್ಯ ಕ್ರಮ ಗಳನ್ನು ಕೈಗೊಳ್ಳಲಾಗುತ್ತಿದೆ. ಜಂಗಲ್‌ ಲಾಡ್ಜ್ ಮತ್ತು ರೆಸಾರ್ಟ್‌ ವತಿಯಿಂದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಿಆರ್‌ಝಡ್‌ ಉಲ್ಲಂಘನೆಯಾಗದಂತೆ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಅವರು ಸೂಚಿಸಿದರು. ಇದಕ್ಕೂ ಮುನ್ನ ಅವರು ಸಸಿಹಿತ್ಲು, ತಣ್ಣೀರುಬಾವಿ ಕಡಲ ತೀರಗಳನ್ನು ಪರಿಶೀಲಿಸಿದರು. ಶಾಸಕರಾದ ಡಾ| ವೈ. ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಉಪಸ್ಥಿತರಿದ್ದರು.

ಇದನ್ನೂ ಓದಿ:ಸಂಕ್ರಾಂತಿಗೆ ಜಾಗತಿಕ ಸೂರ್ಯ ನಮಸ್ಕಾರ !

Advertisement

“ಡಿಕೆಶಿ ಡ್ರಾಮಾ’
ಜನಹಿತದ ನಿಯಮಗಳಿಗೆ ಕಾಂಗ್ರೆಸ್‌ ಗೌರವ ನೀಡುತ್ತಿಲ್ಲ. ಕೇವಲ ನಾಯಕತ್ವಕ್ಕಾಗಿ ಡಿಕೆಶಿ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ರವಿವಾರ ಟೀಕಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next