Advertisement

ಅಂತರ್ಜಲ ವೃದ್ಧಿ ಕಾಮಗಾರಿಗಳಿಗೆ ಆದ್ಯತೆ: ಆಚಾರ್‌

02:45 PM Nov 06, 2019 | Team Udayavani |

ಯಲಬುರ್ಗಾ: ಅಂತರ್ಜಲ ಹೆಚ್ಚಳಕ್ಕೆ ಪೂರಕವಾಗುವ ಕಾಮಗಾರಿಗಳಿಗೆ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದರು.

Advertisement

ನಿಲೋಗಲ್‌ ಗ್ರಾಮದ ಹಳ್ಳದ ಹತ್ತಿರ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಕಳೆದ ಸಾಲಿನ ಅನುದಾನದಲ್ಲಿ 160ಕ್ಕೂ ಹೆಚ್ಚು ಶಾಲಾ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದೇನೆ. ಅವುಗಳು ಪ್ರಗತಿ ಹಂತದಲ್ಲಿವೆ. ಪ್ರಸಕ್ತ ಸಾಲಿನಲ್ಲಿ ಅಂತರ್ಜಲ ಸಂರಕ್ಷಣೆಗೆ ಪೂರಕವಾಗುವ ಕಾಮಗಾರಿಗಳಿಗೆ ಅನುದಾನ ನೀಡಲಾಗುವುದು ಎಂದರು.

ಚೆಕ್‌ ಡ್ಯಾಂ ನಿರ್ಮಾಣ, ಕೆರೆಗಳ ಜೀರ್ಣೋದ್ಧಾರದಿಂದ ಅಂತರ್ಜಲಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ. ಗ್ರಾಮಸ್ಥರು ಸದರಿ ಕಾಮಗಾರಿ ನಿರ್ಮಿಸಿಕೊಳ್ಳಲು ಅಧಿಕಾರಿಗಳು, ಗುತ್ತಿಗೆದಾರರಿಗೆ ಸಹಕಾರ ನೀಡುವ ಮೂಲಕ ಉತ್ತಮ ಗುಣಮಟ್ಟದಿಂದ ನಿರ್ಮಿಸಿಕೊಳ್ಳಬೇಕು ಎಂದರು.

ಈ ಗ್ರಾಮದಲ್ಲಿ ತಲಾ 25 ಲಕ್ಷದಂತೆ ಎರಡು ಚೆಕ್‌ ಡ್ಯಾಂ ನಿರ್ಮಿಸಲಾಗುವುದು. ಈಗಾಗಲೇ ಯರಿಭಾಗದ ಎಲ್ಲ ಕೆರೆ ಜೀರ್ಣೋದ್ಧಾರಗೊಳಿಸಲಾಗಿದೆ. ಈ ಕೆರೆಗಳು ಮಳೆ ನೀರಿನಿಂದ ತುಂಬಿ ಅಂತರ್ಜಲಮಟ್ಟ ಹೆಚ್ಚಳವಾಗಿದೆ. ಕಳಪೆ ಕಾಮಗಾರಿಯ ನಿರ್ಮಿಸದೇ ಗುಣಮಟ್ಟದ ಕಾಮಗಾರಿ ನಿರ್ಮಿಸುವಂತೆ ಸಲಹೆ ನೀಡಿದರು. ಹಿಂದಿನ ಜನಪ್ರತಿನಿಧಿಗಳು, ಸರಕಾರಗಳಾಗಲಿ ಕೆರೆಗಳನ್ನು ಜೀರ್ಣೋದ್ಧಾರಗೊಳಿಸುವ ಕಾಳಜಿ ತೋರಲಿಲ್ಲ. ಆದರೆ ನಾನು ಶಾಸಕನಾದ ಮೇಲೆ ಚೆಕ್‌ ಡ್ಯಾಂ, ಕೆರೆಗಳ ಅಭಿವೃದ್ಧಿ, ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣಕ್ಕಾಗಿ ಸಣ್ಣ ನೀರಾವರಿ ಇಲಾಖೆಗೆ ಸುಮಾರು 60 ಕೋಟಿಗೂ ಅಧಿಕ ಅನುದಾನ ಸರಕಾರದಿಂದ ಬಿಡುಗಡೆ ಮಾಡಿಸಿದ್ದೇನೆ. ಈಗಾಗಲೇ ತಾಲೂಕಿನಲ್ಲಿ 53 ಕಾಮಗಾರಿ ಮುಕ್ತಾಯದ ಹಂತದಲ್ಲಿವೆ. ಮುಂದಿನ ವರ್ಷ ನಿಲೋಗಲ್‌, ಕಲ್ಲಬಾವಿ ಕೆರೆಗಳ ಜೀರ್ಣೋದ್ಧಾರಕ್ಕೆ ಅನುದಾನ ಬಿಡುಗಡೆಗೊಳಿಸುತ್ತೇನೆ ಎಂದರು.

ಈ ವೇಳೆ ಬಿಜೆಪಿ ಮುಖಂಡರಾದ ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ರತನ ದೇಸಾಯಿ, ಶಿವಕುಮಾರ ನಾಗಲಾಪೂರಮಠ, ಈರಪ್ಪ ಕುಡಗುಂಟಿ, ತಾಪಂ ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಪ್ರಭುರಾಜ ಕಲಬುರ್ಗಿ, ಮಲ್ಲಣ್ಣ ಹರ್ಲಾಪೂರ, ಸಂಗನಗೌಡ ಪಾಟೀಲ, ರಾಚಪ್ಪ ಕಟಗಿಹಳ್ಳಿ, ನಾಗನಗೌಡ ಜಾಲಿಹಾಳ, ಆದೇಶ ರೊಟ್ಟಿ, ಕಳಕಪ್ಪ ತಳವಾರ, ವೆಂಕಟೇಶ ವಾಲ್ಮೀಕಿ, ಶರಣಪ್ಪ ಹೊಸ್ಕೇರಿ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next