Advertisement

ಸಾರ್ವಜನಿಕ ಸಮಸ್ಯೆ ಪರಿಹಾರಕ್ಕೆ ಆದ್ಯತೆ

07:14 PM Feb 25, 2021 | Nagendra Trasi |

ವಿಜಯಪುರ: ಕೋವಿಡ್‌ ಸಂಕಷ್ಟದ ಹಿನ್ನೆಲೆ ಜಿಲ್ಲೆಯಲ್ಲಿ ಸಾರ್ವಜನಿಕ ಕುಂದುಕೊರತೆ ಆಲಿಸುವ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸುವಲ್ಲಿ ವಿಳಂಬವಾಗಿದೆ.
ಇದೀಗ ತಾಲೂಕಾವಾರು ಸಾರ್ವಜನಿಕ ಕುಂದು ಕೊರತೆ ಸಭೆ ಹಮ್ಮಿಕೊಳ್ಳುತ್ತಿದೆ. ಸಿಂದಗಿ ತಾಲೂಕಿನಲ್ಲೇ ಕುಂದುಕೊರತೆ ಆಲಿಸುವ ಸಾರ್ವಜನಿಕ ಮೊದಲ
ಸಭೆ ಮೂಲಕವೇ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

ಬುಧವಾರ ಜಿಲ್ಲೆಯ ಸಿಂದಗಿ ಪಟ್ಟಣದ ಸಾತವಿರೇಶ್ವರ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಮಹಿಳೆಯರು, ಹಿರಿಯ ನಾಗರಿಕರು, ವಿಶೇಷ ಚೇತನರು, ರೈತರು ಸೇರಿದಂತೆ ಎಲ್ಲ ವರ್ಗದ ಜನರಿಂದ ಕುಂದುಕೊರತೆ ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಸುಮಾರು 76 ಅರ್ಜಿಗಳಿಗೆ ತಕ್ಷಣ ಪರಿಹಾರ ಕಲ್ಪಿಸಲಾಗಿದೆ. ಉಳಿದ ಅರ್ಜಿಗಳನ್ನು ಸಂಬಂ ಧಿಸಿದ ಕಚೇರಿಗಳಿಗೆ ರವಾನಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸರ್ಕಾರವನ್ನೇ ಜನರ ಹತ್ತಿರಕ್ಕೆ ಕೊಂಡೊಯ್ಯುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂಥ ಕಾರ್ಯಕ್ರಮ ರೂಪಿಸಿದ್ದಾರೆ. ಇದರಿಂದ ಬಡವರ, ರೈತರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಡುವ ಪ್ರಾಮಾಣಿಕ ಪ್ರಯತ್ನ
ಮಾಡಲಾಗುತ್ತಿದೆ. ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಅ ಧಿಕಾರಿಗಳು ಸಹಕಾರ ನೀಡಿ ಸೂಕ್ತ ಸ್ಪಂದಿಸುತ್ತಿದ್ದಾರೆ ಎಂದರು.

ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಸುರಿದ ಮಳೆಯಿಂದಾಗಿ ಭೀಮಾ ಮತ್ತು ಡೋಣಿ ನದಿಗಳು ಪ್ರವಾಹ ಸೃಷ್ಟಿಸಿದಾಗ ಸಾವಿರಾರು ಜನರು ಸಂತ್ರಸ್ತರಾಗಿ, ಸಂಕಷ್ಟಕ್ಕೆ ಸಿಲುಕಿದಾಗ ನಮ್ಮ ಸರ್ಕಾರ ನೆರವಿಗೆ ಧಾವಿಸಿದೆ. ಕೋವಿಡ್‌ ಹಿನ್ನೆಲೆ ಸ್ವಲ್ಪ ವಿಳಂಬವಾಗಿದ್ದರೂ ಸಾರ್ವಜನಿಕ ಕುಂದುಕೊರತೆಗಳಿಗೆ ಸ್ಪಂದಿಸಲು ಈ ಸಭೆ ಆಯೋಜಿಸಿದ್ದು ನಿರೀಕ್ಷೆಗೂ ಮೀರಿ ಸಾರ್ವಜನಿಕರು ಆಗಮಿಸಿ ತಮ್ಮ ಆಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್‌, ರಸ್ತೆ, ಮನೆ ಸೇರಿದಂತೆ ಇನ್ನಿತರ ಸೌಕರ್ಯ
ಕಲ್ಪಿಸುವ ದಿಸೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಬಡ ಜನರ ಸಮಸ್ಯೆಗಳಿಗೆ ಸ್ಪಂದಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ
ಭರವಸೆ ನೀಡಿದರು.

Advertisement

ಇದೇ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್‌, ಆಯುಷ್ಮಾನ್‌ ಭಾರತ, ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಿಸಿದರು. ಸಿಂದಗಿ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಕುಡಿಯುವ ನೀರು, ವಿದ್ಯುತ್‌, ಪುನರ್ವಸತಿ, ರಸ್ತೆಗಳ  ದುರಸ್ತಿ, ಸಿಂದಗಿ ಪಟ್ಟಣದ ಒಳ ಚರಂಡಿ ಸಮಸ್ಯೆ ನಿವಾರಣೆ, ಬೀದಿ ದನಗಳನ್ನು ನೋಂದಾಯಿತ  ಗೋ ಶಾಲೆಗಳಿಗೆ ಕಳುಹಿಸುವ ಒಂದು ವಾರದ ಮುಂಚೆ ನೋಟಿಸ್‌ ಜಾರಿಗೊಳಿಸಿ ಮಾಲೀಕರಿಗೆ ಸೂಕ್ತ ತಿಳಿವಳಿಕೆ ನೀಡಿ ರವಾನಿಸಬೇಕು. ಪಟ್ಟಣದಲ್ಲಿ ವಿದ್ಯುತ್‌ ದೀಪ, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಅರ್ಜಿಗಳು ಸಲ್ಲಿಕೆಯಾಗಿವೆ. 80 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಡಲಾಗಿದೆ ಎಂದರು.

ತಾಲೂಕಿನ ಸ್ಮಶಾನ ಭೂಮಿ, ಅಂಗನವಾಡಿ ಸ್ಥಳದ ಕುರಿತು ಅಧಿ ಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ. ಮಳೆಯಿಂದ ಬಿದ್ದಿರುವ ಮನೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಸಿಂದಗಿ ಪಟ್ಟಣದಲ್ಲಿ ರಸ್ತೆ, ಚರಂಡಿ ವ್ಯವಸ್ಥೆ, ವಿದ್ಯುತ್‌ ದೀಪಗಳ ಸುಧಾರಣೆ ಬಗ್ಗೆ ಪರಿಶೀಲನೆ ಮತ್ತು ಸೂಕ್ತ
ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಾಲೂಕಿನ ಕೆರೆ, ಹಳ್ಳ, ಸೇತುವೆಗಳ ಹತ್ತಿರದ ರಸ್ತೆ ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಪರಿಹರಿಸಿ, ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಪುರಸಭೆ ಅಧ್ಯಕ್ಷ ಅಶೋಕ ಮನಗೂಳಿ, ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ, ಜಿಪಂ ಸಿಇಒ
ಗೋವಿಂದರೆಡ್ಡಿ, ಎಎಸ್ಪಿ ರಾಮ ಅರಿಸಿದ್ಧಿ, ಉಪ ವಿಭಾಗಾ ಧಿಕಾರಿ ರಾಹುಲ್‌ ಸಿಂಧೆ, ತಹಶೀಲ್ದಾರ್‌ ಸಂಜೀವ ದಾಸರ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next