Advertisement

ಮಣ್ಣು, ಜಲ ಸಂರಕ್ಷಣೆಗೆ ಆದ್ಯತೆ

06:42 AM May 25, 2020 | Lakshmi GovindaRaj |

ಕೆ.ಆರ್‌.ನಗರ: ರೈತರ ಜಮೀನುಗಳಲ್ಲಿ ಮಣ್ಣು, ಜಲ ಸಂರಕ್ಷಣೆಗೆ ಆದ್ಯತೆ ನೀಡುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆಯಡಿ ತಾಲೂಕಿನ  ಎಲ್ಲಾ ಗ್ರಾಪಂನಲ್ಲೂ ಬದು ನಿರ್ಮಾಣ ಕಾಮಗಾರಿ ಮಾಸಾಚರಣೆ  ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಎಂ.ಎಸ್‌.ರಮೇಶ್‌ ಹೇಳಿದರು.

Advertisement

ತಾಲೂಕಿನ ಮಾವತ್ತೂರು ಗ್ರಾಪಂ ವ್ಯಾಪ್ತಿಯ ಮಾರಗೌಡನಹಳ್ಳಿ ಗ್ರಾಮದ ರೈತ ವಿಶ್ವೇಶ್ವರಯ್ಯ ಅವರ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, 1 ತಿಂಗಳವರೆಗೆ 34 ಗ್ರಾಪಂಗಳಲ್ಲಿ 710 ಬದು ನಿರ್ಮಾಣ ಕಾಮಗಾರಿ ಮಾಡುವ ಗುರಿ ಹೊಂದಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗುವುದು.

ಕೆರೆ  ಅಭಿವೃದ್ಧಿ, ಪ್ರವಾಹ ನಿಯಂತ್ರಣ ಕಾಮಗಾರಿ, ನಮ್ಮ ಹೊಲ ನಮ್ಮ ದಾರಿ, ಸ್ಮಶಾನ ಅಭಿವೃದ್ಧಿ ಮತ್ತು ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆ  ಎಂದು ತಿಳಿಸಿದರು. ಕುರಿ, ದನದ ಕೊಟ್ಟಿಗೆ, ಕೃಷಿ ಹೊಂಡ, ಜಲ  ಮರುಪೂರಣ ಘಟಕ ಸೇರಿದಂತೆ ಇತರ ಮುಂತಾದ 21 ಅಂಶಗಳ ಒಟ್ಟು 4,362 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಗ್ರಾಮೀಣರಿಗೆ ಉದ್ಯೋಗ ಕಲ್ಪಿಸಲು 4  ಲಕ್ಷ ಮಾನವ ದಿನಗಳನ್ನು ಸೃಷ್ಟಿ ಮಾಡಲು ಗುರಿ ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ತಾಪಂ ಅಧ್ಯಕ್ಷ ಎಂ.ನಾಗರಾಜು, ಸದಸ್ಯ ಕೆ.ಎಲ್‌. ಲೋಕೇಶ್‌, ಸಹಾಯಕ ಕೃಷಿ ನಿರ್ದೇಶಕ ಶಶಿಧರ್‌, ತೋಟಗಾರಿಕಾ ಇಲಾಖೆ  ಹಿರಿಯ ಸಹಾಯಕ ನಿರ್ದೇಶಕ ಪ್ರಸನ್ನ, ಪಿಡಿಒ ಭವ್ಯ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next