Advertisement

ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ

11:50 AM Jul 04, 2017 | |

ಕೆಂಗೇರಿ: ಗ್ರಾಮೀಣ ಪ್ರದೇಶದಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಆದ್ಯತೆ ಮೇರೆಗೆ ಉತ್ತಮ ಸೌಲಭ್ಯವುಳ್ಳ ಅತ್ಯಾಧುನಿಕ ಕ್ರೀಡಾ ಉಪಕರಣಗಳನ್ನೊಳಗೊಂಡ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

Advertisement

ದೇವಗೆರೆ ವಿನಾಯಕ ಕ್ರಿಕೆಟರ್ಸ್‌ ವತಿಯಿಂದ ವಿಕೆಐಟಿ ಕಾಲೇಜು ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, “ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಕ್ರೀಡಾ ಸೌಲಭ್ಯ ಒದಗಿಸಿದರೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉನ್ನತ ಸಾಧನೆ ತೋರುತ್ತಾರೆ,’ ಎಂದರು. 

ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಬಿ.ಆರ್‌.ಶಿವಮಾದಯ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಕ್ರೀಡಾಪಟುಗಳಿದ್ದು, ಅವರಿಗೆ ಉತ್ತಮ ವೇದಿಕೆ ಒದಗಿಸುವ ಮೂಲಕ ಅವರಲ್ಲಿ ಅಡಗಿರುವ ಕ್ರೀಡಾಪ್ರತಿಭೆಯನ್ನು ಹೊರತರಬೇಕು. ಆ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ವೇದಿಕೆ ಒದಗಿಸುವ ದಿಕ್ಕಿನತ್ತ ನಾವೆಲ್ಲರೂ ಚಿಂತನೆ ನಡೆಸಬೇಕು ಎಂದು ಹೇಳಿದರು. 

ಕುಂಬಳಗೋಡು ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಪಟೇಲ್‌ ನರಸೇಗೌಡ, ಎಚ್‌.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಈರಯ್ಯ, ಕೆ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್‌, ಕುಮಾರಸ್ವಾಮಿ, ಕೆಡಿಪಿ ಸದಸ್ಯ ಹೊನ್ನಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ವೈ.ಶಿವಣ್ಣ, ಯುವ ಮುಖಂಡ ಲಕ್ಕಣ್ಣ, ಸುರೇಶ್‌, ನರಸಿಂಹಮೂರ್ತಿ ಮತ್ತಿತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next