ಇಸ್ಲಾಮಾಬಾದ್: ಗರ್ಭಿಣಿಯ ಮೇಲೆ ಐವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:ಸುಳ್ಯ: ಅಪರಿಚಿತ ತಂಡದಿಂದ ಗುಂಡಿನ ದಾಳಿ; ಕೂದಲೆಳೆ ಅಂತರದಿಂದ ಪಾರಾದ ಯುವಕ!
ಪೊಲೀಸರ ಮಾಹಿತಿ ಪ್ರಕಾರ, ಐವರು ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿದ್ದು, ನಂತರ ಆಕೆಯ ಪತಿಯನ್ನು ಕಟ್ಟಿಹಾಕಿದ್ದರು. ಬಳಿಕ ಗರ್ಭಿಣಿಯ ಮೇಲೆ ಐವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ.
ಘಟನೆಯ ನಂತರ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಸಂತ್ರಸ್ತೆಯ ಮಾಹಿತಿಯಂತೆ ಆಸ್ಪತ್ರೆಯ ಸಿಬಂದಿಗಳು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.
ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಆಕೆಯ ರಕ್ತದ ಮಾದರಿಯನ್ನು ಲಾಹೋರ್ ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪಂಜಾಬ್ ಪೊಲೀಸರು, ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಘಟನೆ ಬಗ್ಗೆ ಪಾಕಿಸ್ತಾನದ ಜನರು ಆಘಾತ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳು ಕರಾಚಿಯಲ್ಲಿ ಚಲಿಸುತ್ತಿದ್ದ ರೈಲಿನೊಳಗೆ 25 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿತ್ತು.