Advertisement

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

01:18 PM Jan 03, 2025 | Team Udayavani |

ಥಾಣೆ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರು ಹೆರಿಗೆ ಸಂದರ್ಭದಲ್ಲಿ ಹೃದಯಾಘಾತಗೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಮಂಗಳವಾರ(ಡಿ.31) ರಾತ್ರಿ ನಡೆದಿದೆ.

Advertisement

ವಿಕ್ರಮಗಡ ತಾಲೂಕಿನ ಗಲ್ತರೆ ಗ್ರಾಮದ ಮಹಿಳೆಯೊಬ್ಬರಿಗೆ ಮಂಗಳವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದೆ ಈ ವೇಳೆ ಕುಟುಂಬಸ್ಥರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆತಂದಿದ್ದಾರೆ ಆದರೆ ಮಹಿಳೆಗೆ ಹೆರಿಗೆ ನೋವು ಇದ್ದುದರಿಂದ ಹೆಚ್ಚಿನ ಚಿಕಿತ್ಸೆಗೆ ಜವಾಹರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ ಅದರಂತೆ ಕುಟುಂಬ ಸದಸ್ಯರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮಹಿಳೆಗೆ ಹೆರಿಗೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಆಪರೇಷನ್ ನಡೆಸಲು ಕರೆದುಕೊಂಡು ಹೋದ ಕೆಲ ಹೊತ್ತಿನಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ,
ಇನ್ನು ಈ ಕುರಿತು ಮಾಹಿತಿ ನೀಡಿದ ಜವಾಹರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಭರತ್ ಮಹಾಲೆ, ಹೆರಿಗೆಗೆಂದು ಆಸ್ಪತ್ರೆಗೆ ಬಂದಿದ್ದ ಮಹಿಳೆ ಆರೋಗ್ಯವಾಗಿದ್ದರು ಆದರೆ ಹೆರಿಗೆ ಸಮಯದಲ್ಲಿ ಆಕೆಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾಳೆ. ಆದರೂ ಮಗುವನ್ನು ಉಳಿಸಲು ಪ್ರಯತ್ನಿಸಿದೇವು ಆದರೆ ಅದೂ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು ವರದಿ ಬಂದ ಬಳಿಕ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

Advertisement
Advertisement

Udayavani is now on Telegram. Click here to join our channel and stay updated with the latest news.

Next