Advertisement
ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಪತ್ರಿಕಾ ಪ್ರಕಟನೆ ನೀಡಿದ್ದು, ಕೆಪಿಎಸ್‌ಸಿಯಲ್ಲಿ ಯಾವುದೇ ಹಗರಣ ನಡೆದಿಲ್ಲ, ಈಗಾಗಲೇ ನಿಗದಿ ಪಡಿಸಿರುವಂತೆ ಆ. 27ರಂದೇ ಪರೀಕ್ಷೆ ನಡೆಯಲಿದೆ ಎಂದು ಹೇಳಿದ್ದಾರೆ.
ಕೆಪಿಎಸ್‌ಸಿ ಪರೀಕ್ಷೆ ವಿಚಾರವಾಗಿ ನಡೆಯುತ್ತಿರುವ ಗೊಂದಲಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿರುವ ಬಿಜೆಪಿ ಯುವ ಮೋರ್ಚಾ, ಪರೀಕ್ಷೆ ಮುಂದೂಡಿಕೆಗಾಗಿ ನಡೆಯುತ್ತಿರುವ ಪ್ರತಿಭಟನೆ, ಪೊಲೀಸರಿಂದ ಪ್ರತಿಭಟನಾಕಾರರ ಬಂಧನ ಸೇರಿದಂತೆ ಎಲ್ಲ ವಿಷಯಗಳನ್ನೂ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದೆ. ರವಿವಾರ ರಾಜಭವನಕ್ಕೆ ತೆರಳಿದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ರಾಜ್ಯ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ನೇತೃತ್ವದ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ವಿವರಣೆ ನೀಡಿದೆ.