Advertisement

ಪ್ರಧಾನಿ ಭೇಟಿ; ಡಿಸಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

08:45 AM Apr 06, 2019 | Team Udayavani |

ಮಂಗಳೂರು: ಪ್ರಧಾನಿ ಮೋದಿ ನಗರಕ್ಕೆ ಆಗಮಿಸುವ ಹಿನ್ನಲೆಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ಚುನಾವಣ ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಪ್ರಧಾನಿಗೆ ನೀಡಬೇಕಾದ ಭದ್ರತಾ ವ್ಯವಸ್ಥೆ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಎಸ್‌. ಶಶಿಕಾಂತ ಸೆಂಥಿಲ್‌ ಅವರು ಅಧಿಕಾರಿಗಳು ಮತ್ತು ಸಂಬಂಧಪಟ್ಟ ಪಕ್ಷದ ಮುಖಂಡರ ಸಭೆ ನಡೆಸಿದರು.

Advertisement

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳು, ಆಗಮನ ಮತ್ತು ನಿರ್ಗಮನದ ಬಗ್ಗೆ ಪಿಎಂಒದಿಂದ ಬಂದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಸ್ತೆಗಳ ಹೊಂಡ ಸರಿಪಡಿಸುವ ಬಗ್ಗೆ ಮತ್ತು ಕಾರ್ಯಕ್ರಮ ಆಯೋಜನೆ ಬಗ್ಗೆ ಸಮನ್ವಯ ಸಾಧಿಸಿ ಗೊಂದಲಗಳಾಗದಂತೆ ಜಿಲ್ಲಾಡಳಿತದ ಪರವಾಗಿ ಮಂಗಳೂರು ಮನಪಾ ಆಯುಕ್ತರನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದರು.

ಸಂಬಂಧಪಟ್ಟ ವ್ಯವಸ್ಥೆಗಳ ಬಗ್ಗೆ ಲೋಕೋಪಯೋಗಿ ಲಾಖೆಯನ್ನೊಳಗೊಂಡಂತೆ ವಿವಿಧ ಅಧಿಕಾರಿಗಳು ಪರಿಶೀಲನೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಈ ವ್ಯವಸ್ಥೆಯ ವೆಚ್ಚಗಳನ್ನು ಪಕ್ಷದವರು ನೋಡಿಕೊಳ್ಳಬೇಕು ಎಂದರು. ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪೊಲೀಸ್‌ ಕಮಿಷನರ್‌ ಅವರ ಸೂಚನೆ, ನಿರ್ದೇಶನಗಳನ್ನು ಪಾಲಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಚುನಾವಣ ನೀತಿ ಸಂಹಿತೆ ಜಾರಿಯಲ್ಲಿರುವ ವೇಳೆ ಸದಾಚಾರ ಸಂಹಿತೆ ಉಲ್ಲಂಘನೆಯಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಿ ಎಂದು ಪಕ್ಷದವರಿಗೆ ಸೂಚನೆ ನೀಡಲಾಯಿತು. ಪ್ರಚಾರ ಸಾಮಗ್ರಿಗಳನ್ನು ಅನುಮತಿಯೊಂದಿಗೆ ಬಳಸಿ ಎಂಬ ಮುನ್ನೆಚ್ಚರಿಕೆಯನ್ನು ನೀಡಿದರು.

ಜಿಪಂ ಸಿಇಒ ಡಾ| ಸೆಲ್ವಮಣಿ ಆರ್‌., ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌, ಎಸ್‌ಪಿ ಲಕ್ಷ್ಮೀಪ್ರಸಾದ್‌, ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next