Advertisement

ಉಪ ಚುನಾವಣೆಗೆ ಕಟ್ಟುನಿಟ್ಟಿನ ಸಿದ್ಧತೆ

11:40 AM Apr 30, 2019 | pallavi |

ಧಾರವಾಡ: ಮೇ 19ರಂದು ನಡೆಯಲಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಕಟ್ಟುನಿಟ್ಟಾದ ಮಾದರಿ ನೀತಿ ಸಂಹಿತೆಯ ಅನುಷ್ಠಾನದೊಂದಿಗೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಒತ್ತು ನೀಡಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ವೀಕ್ಷಕ ಎಚ್.ಅರುಣಕುಮಾರ್‌ ಹೇಳಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಲೋಕಸಭಾ ಚುನಾವಣೆಯನ್ನು ನಡೆಸಿರುವ ಅನುಭವ ಬಳಸಿಕೊಂಡು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನೂ ಅಷ್ಟೇ ಮುತುವರ್ಜಿ ಮತ್ತು ಎಚ್ಚರಿಕೆಗಳಿಂದ ನಡೆಸಬೇಕು. ಯಾವುದೇ ರೀತಿಯಲ್ಲೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಆಸ್ಪದ ನೀಡಬಾರದು. ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದೇ ಬಿಗಿ ವಾತಾವರಣದ ಮಧ್ಯೆ ಶಾಂತಿಯುತ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿರುವ ಎಲ್ಲ ಸಮಿತಿಗಳ ನೋಡಲ್ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಸಕಾಲದಲ್ಲಿ ವರದಿಗಳನ್ನು ಸಲ್ಲಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಚುನಾವಣಾಕಾರಿ ದೀಪಾ ಚೋಳನ್‌ ಮಾತನಾಡಿ, ಉಪಚುನಾವಣೆಗೆ 18 ಸೆಕ್ಟರ್‌ ಅಧಿಕಾರಿಗಳು, 15 ಫ್ಲ್ತ್ರೈಯಿಂಗ್‌ ಸ್ಕ್ವಾಡ್‌ ತಂಡಗಳು, 18 ಸ್ಥಿರ ಕಣ್ಗಾವಲು ತಂಡಗಳು, ಇಬ್ಬರು ಸಹಾಯಕ ವೆಚ್ಚ ವೀಕ್ಷಕರು, 2 ವೆಚ್ಚ ನಿರ್ವಹಣಾ ತಂಡಗಳು, 2 ವಿಡಿಯೋ ವೀಕ್ಷಣಾ ತಂಡಗಳು, 15 ವಿಎಸ್‌ಟಿ ತಂಡ ರಚಿಸಲಾಗಿದೆ. ಎಲ್ಲ ತಂಡಗಳು ಸರದಿ ಆಧಾರದಲ್ಲಿ ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿವೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಮರುಮಾಪನ ಮಾಡಿ ನಿರ್ಧರಿಸಲಾಗುವುದು. ಸಿವಿಜಿಲ್ ಮೊಬೈಲ್ ಆ್ಯಪ್‌ ಹಾಗೂ 1950 ಸಹಾಯವಾಣಿ ಸಂಖ್ಯೆಗಳ ಮೂಲಕ ದೂರುಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ ಕಾರ್ಯನಿರ್ವಹಿಸುತ್ತದೆ ಎಂದರು.

ಮಾಧ್ಯಮ ವೀಕ್ಷಣಾ ಕೇಂದ್ರಕ್ಕೆ ಭೇಟಿ: ಕೇಂದ್ರ ಚುನಾವಣಾ ಆಯೋಗದ ವೀಕ್ಷಕ ಎಚ್.ಅರುಣಕುಮಾರ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ವಿಭಾಗ ಹಾಗೂ ಮಾಧ್ಯಮ ವೀಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯಚಟುವಟಿಕೆಗಳ ವಿಧಾನದ ಕುರಿತು ಸಲಹೆ, ಸೂಚನೆಗಳನ್ನು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next