ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಅವರ ಗೈರು ಹಾಜರಿನಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ 67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ದಾವಣಗೆರೆ ಹಾಗೂ ಚಿಕ್ಕಮಗಳೂರು ಎರಡು ಜಿಲ್ಲೆಗೂ ಉಸ್ತುವಾರಿ ಸಚಿವರಾಗಿರುವ ಭೈರತಿ ಬಸವರಾಜು ದಾವಣಗೆರೆ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಧ್ವಜಾರೋಹಣ ನೆರವೇರಿಸಿದರು.
ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಇದೇ ಮೊದಲ ಬಾರಿಗೆ ಶಾಲಾ ಮಕ್ಕಳು, ಪೊಲೀಸರ ಜೊತೆ ಪಥಸಂಚಲನದಲ್ಲಿ ಕಂಸಾಳೆ, ಡೊಳ್ಳು, ಚೆಂಡೆ ವಾಧ್ಯ, ವೀರಗಾಸೆ, ಸ್ಥಬ್ಧ ಚಿತ್ರ ಸೇರಿದಂತೆ ನಾಡಿನ ಸಂಸ್ಕೃತಿಯ ಪರಂಪರೆಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರವಣಿಗೆಗೂ ಅವಕಾಶ ನೀಡಲಾಗಿತ್ತು.
ಕಾರ್ಯಕ್ರಮಕ್ಕೂ ಮುನ್ನ ಕನ್ನಡ ರಾಜ್ಯೋತ್ಸವದ ಮೆರವಣಿಗೆ ವೇಳೆ ಜಿಲ್ಲಾಡಳಿತ ಹಾಗೂ ಶಾಸಕ ಸಿ.ಟಿ.ರವಿ ವಿರುದ್ಧ ಅಸಮಾಧಾನ ಹೊರ ಹಾಕಿ ಕಪ್ಪು ಪಟ್ಟಿ ಪ್ರದರ್ಶಿಸಲು ಸಿದ್ಧತೆ ನಡೆಸಿದ್ದ 20ಕ್ಕೂ ಹೆಚ್ಚು ದಲಿತ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದರು.
Related Articles
ಕಳೆದ ನಾಲ್ಕೈದು ದಿನಗಳಿಂದ ನಗರದ ಆಜಾದ್ ಪಾರ್ಕ್ ಬಳಿ, ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಸಮೀಪ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ತೋಟದ ಮಾಲೀಕನ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳು
ಪ್ರತಿಭಟನೆ ನಡೆಸುತ್ತಿದ್ದವು. ತೋಟದ ಮಾಲೀಕನನ್ನ ಬಂಧಿಸದ ಕಾರಣ ಕಾರ್ಯಕರ್ತರು ಜಿಲ್ಲಾಡಳಿತದ ಮೇಲೆ ಆಕ್ರೋಶ ಹೊರಹಾಕುವ ವೇಳೆ ಎಲ್ಲರನ್ನೂ ಬಂಧಿಸಿದ್ದಾರೆ.