Advertisement
ಅಯೋಧ್ಯೆಯ ಮಾದರಿಯಲ್ಲೇ 19 ಎಕರೆ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಲಾಗಿದ್ದು ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚ ಮಾಡಲು ತೀರ್ಮಾನಿಸಲಾಗಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಿದಂತೆ ತೀವ್ರಗತಿಯಲ್ಲಿ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ಈ ಸಂಬಂಧ ಅಧಿಕಾರಿಗಳೊಂದಿಗೆ ಮೂರು ಸುತ್ತಿನ ಸಭೆ ನಡೆಸಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದಲೂ ದೇಣಿಗೆ ಅಥವಾ ಅಗತ್ಯ ಸಾಮಗ್ರಿ ಸಂಗ್ರಹದ ಬಗ್ಗೆಯೂ ಚರ್ಚೆ ನಡೆದಿದೆ.
Related Articles
Advertisement
ಬೃಹತ್ ಹಿಂದೂ ಸಮಾವೇಶ?ಹಳೇ ಮೈಸೂರು ಭಾಗದಲ್ಲಿ ಹಿಂದುತ್ವ ಪ್ರತಿಪಾದಿಸಿ ಮತಬ್ಯಾಂಕ್ ಸೃಷ್ಟಿಗೆ ರಾಮಮಂದಿರ ಘೋಷಣೆ ಅನುಕೂಲವಾಗಲಿದೆ ಎಂಬ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಕ್ಕೆ ಮುನ್ನ ಮಾರ್ಚ್ ಎರಡನೇ ಅಥವಾ ಮೂರನೇ ವಾರದಲ್ಲಿ ರಾಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಥವಾ ಪ್ರಧಾನಿ ನರೇಂದ್ರ ಮೋದಿ ಕರೆಸುವ ಬಗ್ಗೆಯೂ ಚಿಂತನೆಯಿದ್ದು, ಅದೇ ಸಂದರ್ಭದಲ್ಲಿ ಬೃಹತ್ ಹಿಂದೂ ಸಮಾವೇಶಕ್ಕೂ ಯೋಜನೆ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ. ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸುವವರಿಗೆ ತಿರುಗೇಟು ನೀಡಲು ರಾಮದೇವರ ಬೆಟ್ಟದಲ್ಲಿ ಸುಗ್ರೀವ ಪಟ್ಟಾಭಿರಾಮನ ವಿಗ್ರಹ ಸ್ಥಾಪಿಸಿದ್ದು, ನಾಡಪ್ರಭು ಕೆಂಪೇಗೌಡರು ಮಂಟಪ ನಿರ್ಮಿಸಿದ್ದು ಸೇರಿದಂತೆ ಅಲ್ಲಿನ ಸ್ಥಳಪುರಾಣ ಹಾಗೂ ಐತಿಹಾಸಿಕ ಸಂಗತಿಗಳನ್ನೂ ಕಲೆ ಹಾಕಲಾಗುತ್ತಿದ್ದು, ಪುರಾತತ್ವ ಇಲಾಖೆಯಲ್ಲಿ ದಾಖಲಾಗಿರುವ 18 ನೇ ಶತಮಾನದ ಶಿಲಾಶಾಸನದ ಮಾಹಿತಿ ಸಹ ಸಂಗ್ರಹಿಸಲಾಗಿದೆ ಎಂದು ಹೇಳಲಾಗಿದೆ. ಪ್ರವಾಸಿ ಸರ್ಕಿಟ್
ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣದ ಬಳಿ ಪ್ರವಾಸಿ ಸರ್ಕಿಟ್‌ಗೂ ಯೋಜನೆ ರೂಪಿಸಲಾಗಿದೆ. ಕನಕಪುರ-ರಾಮನಗರ-ಚನ್ನಪಟ್ಟಣ- ಮಾಗಡಿ-ದೇವನಹಳ್ಳಿ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಪ್ರವಾಸಿ ಸರ್ಕಿಟ್ ಬರಲಿದೆ. ರಾಮದೇವರ ಬೆಟ್ಟದ ರಾಮಮಂದಿರದಿಂದ ಸಾವನದುರ್ಗದ ಲಕ್ಷ್ಮಿ ನರಸಿಂಹ ದೇವಾಲಯ, ಮಾಗಡಿಯಲ್ಲಿ ಕೆಂಪೇಗೌಡರ ಜನ್ಮಸ್ಥಳ, ಕೆಂಪೇಗೌಡರ ಪ್ರತಿಮೆ, ನಂದಿ ಬೆಟ್ಟ ಪ್ರವಾಸಿ ಸರ್ಕಿಟ್‌ಗೆ ಸೇರ್ಪಡೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಗುಲದ ಜತೆ ರಾಮಪಥ ಮ್ಯೂಸಿಯಂ
ಈಗಿನ ಪ್ರಕಾರ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ್ದ ಮಂಟಪ ಸಹಿತ ಈಗಿರುವ ದೇವಾಲಯ ಪುನಶ್ಚೇತನದೊಂದಿಗೆ ಭವ್ಯ ರಾಮಮಂದಿರ ನಿರ್ಮಾಣ ಮಾಡುವುದು. ಇದರ ಜತೆಗೆ ಶ್ರೀರಾಮ ದ್ವಾರಾ, ರಾಮಮಂದಿರ ಪೆವಿಲಿಯನ್, ಅಶೋಕವನ, ಶ್ರೀರಾಮ ಪಥ ಮ್ಯೂಸಿಯಂ, ಜಟಾಯು ಗ್ಯಾಲರಿ ನಿರ್ಮಾಣ ಯೋಜನೆಯಲ್ಲಿ ಸೇರಿದೆ.