Advertisement
ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅಗತ್ಯವಿರುವವರಿಗೆ ದಿನಸಿ ಸಾಮಗ್ರಿಗಳನ್ನು ಗ್ರಾ.ಪಂ.ಮೂಲಕ ಒದಗಿಸುವ ಕಾರ್ಯ ಮಾಡಲಿದ್ದೇವೆ. ನಿತ್ಯ 8 ಸಾವಿರ ಜನರಿಗೆ ಪರೀಕ್ಷೆ ಮಾಡುತ್ತಿದ್ದೇವೆ. 15ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಭರದಿಂದ ಸಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಸಂಜೆ 7ರ ಬಳಿಕ ಸಾರ್ವಜನಿಕರು ಬೀಚ್‌ಗೆ ಹೋಗುವುದು ಅಥವಾ ಅಲ್ಲಿ ಇರುವುದನ್ನು ನಿರ್ಬಂಧಿಸಲಾಗುವುದು. ವಿಶೇಷವಾಗಿ ಮಲ್ಪೆ ಬೀಚ್‌ನಲ್ಲಿ ಇದನ್ನು ಕೂಡಲೇ ಕಟ್ಟುನಿಟ್ಟಾಗಿ ಜಾರಿ ಮಾಡಲಿದ್ದೇವೆ ಎಂದರು. ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ. ಸಿಇಒ ಡಾ| ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಇದ್ದರು.
Related Articles
ಪೂರ್ವ ನಿಗದಿಯಾಗಿರುವ ಅಡ್ವೆ ನಂದಿಕೂರು ಕಂಬಳಕ್ಕೆ ಅವಕಾಶ ನೀಡುವಂತೆ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ಮೊದಲಾದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Advertisement
ಫೆಬ್ರವರಿಯಲ್ಲಿ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಸಲಹೆ ನೀಡಿದರು. ಸಚಿವ ಸುನಿಲ್ ಕುಮಾರ್ ಮಾತನಾಡಿ, ಈ ಬಗ್ಗೆ ಪರಿಶೀಲಿಸುತ್ತೇವೆ. ಪರ್ಯಾಯವನ್ನು ಅತ್ಯಂತ ಸರಳ ರೀತಿಯಲ್ಲಿ ಮಾಡಲಿದ್ದೇವೆ. ಹೀಗಾಗಿ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ನೀಡುತ್ತಿಲ್ಲ ಎಂದರು.
ಇದನ್ನೂ ಓದಿ:ದೇವರಿಗೇ ಪೊಲೀಸ್ ಸಮವಸ್ತ್ರ! ಕಾಶಿಯ ಕೊತ್ವಾಲ ಬಾಬಾ ಕಾಲ ಭೈರವನಿಗೆ ಖಾಕಿ ಸಮವಸ್ತ್ರ
ಭೌತಿಕ ತರಗತಿ ರದ್ದತಿ ಮುಂದಿನ ಸಭೆಯಲ್ಲಿ ನಿರ್ಧಾರಉಡುಪಿ: ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಶಾಲೆಗಳಲ್ಲಿ ಭೌತಿಕ ತರಗತಿ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕೊರೊನಾ ಸಂಬಂಧ ಶೀಘ್ರದಲ್ಲೆ ನಡೆಯಲಿರುವ ಮುಂದಿನ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಬೆಂಗಳೂರು ಮಹಾನಗರದಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗೆ ಬರುವುದನ್ನು ರದ್ದು ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ಸಂಬಂಧ ಯಾವುದೇ ಕ್ರಮ ಇನ್ನು ತೆಗೆದುಕೊಂಡಿಲ್ಲ. ಮುಂದಿನ ಸಭೆಯಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ಜಿಲ್ಲೆಯ ಸಚಿವರು ಹಾಗೂ ಶಾಸಕರೊಂದಿಗೆ ಈ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ಕೆಲವು ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಬಂದಿವೆ. ಸ್ವಲ್ಪ ದಿನ ಕಾದು, ಶಾಲೆಗಳಲ್ಲಿ ಪ್ರಕರಣ ಜಾಸ್ತಿಯಾದರೆ ಮುಂದಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಿದ್ದೇವೆ. ಕೊರೊನಾ ಪ್ರಕರಣ ಪತ್ತೆಯಾಗಿರುವ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ, ಸ್ವತ್ಛತೆಯ ಜತೆಗೆ ಕಂಟೈನ್ಮೆಂಟ್ ವಲಯ ರಚಿಸುವ ಕಾರ್ಯವೂ ಆಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾಹಿತಿ ನೀಡಿದರು.