Advertisement

ಯುಸಿಸಿ ಜಾರಿಗೆ ಸಿದ್ಧತೆ… ಈ ತಿಂಗಳಿನಲ್ಲೇ ಸಂಸತ್ತಿನಲ್ಲಿ ಮಸೂದೆ ಮಂಡನೆ?

09:51 PM Jun 30, 2023 | Team Udayavani |

ಹೊಸದಿಲ್ಲಿ: ಮುಂದಿನ ವರ್ಷದ ಲೋಕಸಭೆ ಚುನಾವಣೆಗೆ ಮುನ್ನವೇ ಮತ್ತೂಂದು ಐತಿಹಾಸಿಕ ನಿರ್ಧಾರ ಕೈಗೊಳ್ಳಲು ಕೇಂದ್ರ ಸರಕಾರ ಸಜ್ಜಾಗುತ್ತಿದೆ. ದೇಶಾದ್ಯಂತ ಸಮಾನ ನಾಗರಿಕ ಸಂಹಿತೆಯನ್ನು ಜಾರಿ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವಿಸಿದ ಬೆನ್ನಲ್ಲೇ ಪ್ರಕ್ರಿಯೆಗಳು ಭರದಿಂದ ಸಾಗಿದ್ದು, ಜುಲೈಯಲ್ಲಿ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲೇ ಏಕರೂಪ ನಾಗರಿಕ ಸಂಹಿತೆಯ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ.

Advertisement

ಸಮಾನ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಅಭಿಪ್ರಾಯ ಆಹ್ವಾನಿಸಿದ್ದ ಕಾನೂನು ಆಯೋಗಕ್ಕೆ ಮಂಗಳವಾರ ಸಂಜೆಯವರೆಗೆ ಸುಮಾರು 8.5 ಲಕ್ಷ ಪ್ರತಿಕ್ರಿಯೆಗಳು ಬಂದಿವೆ. ಇದರ ಬೆನ್ನಲ್ಲೇ ಸಿಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯು ಜು. 3ರಂದು ಈ ಕುರಿತು ಚರ್ಚಿಸಲು ಕಾನೂನು ಆಯೋಗ ಹಾಗೂ ಕೇಂದ್ರ ಕಾನೂನು ಸಚಿವಾಲಯದ ಪ್ರತಿನಿಧಿಗಳ ಸಭೆ ಕರೆದಿದೆ. ಸದ್ಯದಲ್ಲೇ ಮಸೂದೆಯನ್ನು ಸ್ಥಾಯಿ ಸಮಿತಿ ಪರಿಶೀಲಿಸುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next