Advertisement
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ, ಜಿ.ಪಂ. ಸಿಇಒ ಸಿಂಧು ಬಿ. ರೂಪೇಶ್, ವಿಕೋಪ ನಿರ್ವಹಣೆಯಲ್ಲಿ ಪ್ರತೀ ಇಲಾಖೆಯ ಪಾತ್ರ ಬಹು ಮುಖ್ಯ. ಜಿಲ್ಲಾ ಮಟ್ಟದಲ್ಲಿ ವಿಕೋಪಗಳನ್ನು ಯಶಸ್ವಿಯಾಗಿ ನಿರ್ವಹಿಸಬೇಕಾದರೆ ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜನೆ ಅತ್ಯಗತ್ಯ. ಜಿಲ್ಲಾ ಮಟ್ಟದ ಯೋಜನೆಯನ್ನು ಪ್ರತೀ ವರ್ಷ ಪರಿಷ್ಕರಣೆಗೊಳಿಸಬೇಕು. ವಿಕೋಪ ನಿರ್ವಹಣಾ ಕಾಯಿದೆ-2005ರಂತೆ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ವಿಕೋಪ ನಿರ್ವಹಣೆಯನ್ನು ನಿಭಾಹಿಸಬೇಕೆಂದರು.
Related Articles
Advertisement
ರಾಷ್ಟ್ರೀಯ ವಿಕೋಪ ನಿರ್ವಹಣಾ ಪ್ರಾಧಿಕಾರದವರು ವಿಪತ್ತು ನಿರ್ವಹಣಾ ಯೋಜನೆಗೆ ಸಿದ್ದಪಡಿಸಿರುವ ಮಾರ್ಗದರ್ಶಿ ಆಧಾರದ ಮೇಲೆ ಸೂಕ್ತ ನಮೂನೆ ಪರಿಚಯಿಸಿದರು. ಭೌಗೋಳಿಕ ಮಾಹಿತಿ ವ್ಯವಸ್ಥೆ, ಮಾಹಿತಿ ದೂರ ಸಂವೇದಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವುದು ವಿಪತ್ತು ನಿರ್ವಹಣೆ ಯೋಜನೆಗೆ ಸಹಕಾರಿ ಎಂದರು.
ಜಿಲ್ಲಾ ಮಟ್ಟದ ಕಂದಾಯ, ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ, ಕರಾವಳಿ ಕಾವಲು ಪಡೆ, ಆರೋಗ್ಯ, ಗಣಿ ಮತ್ತು ಭೂ ವಿಜ್ಞಾನ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅರಣ್ಯ, ಗ್ರಾಮಿಣಾಭಿವೃದ್ಧಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ. ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗ, ವಿದ್ಯುತ್ಛಕ್ತಿ¤ ಮುಂತಾದ “ಎ’ ಮತ್ತು “ಬಿ’ ವೃಂದದ ಸುಮಾರು 45 ಅಧಿಕಾರಿಗಳು ಭಾಗವಹಿಸಿದ್ದರು.
ಉಡುಪಿ ಜಿಲ್ಲಾ ವಿಕೋಪ ನಿರ್ವಹಣಾ ತಜ್ಞ ರವಿ ಓಜನಹಳ್ಳಿ ಅವರು ಪ್ರತಿ ಇಲಾಖೆಯ ಮಾಹಿತಿ, ಜವಾಬ್ದಾರಿ ಹಾಗೂ ಯೋಜನೆಗಳನ್ನು ಸಂಗ್ರಹಿಸಿ, ಕ್ರೋಡೀಕರಿಸಿ ಜಿಲ್ಲೆಯ ಪ್ರತೀ ಇಲಾಖೆ ಹಾಗೂ ಸರಕಾರೇತರ ಸಂಸ್ಥೆಗಳಿಗೆ ತಲುಪಿಸುವುದಾಗಿ ತಿಳಿಸಿದರು.