Advertisement

ಫೆ.7 ರಿಂದ ರಾಜ್ಯ ಬಜೆಟ್ ಪೂರ್ವಭಾವಿ ಸಿದ್ಧತೆ: ಸಿಎಂ ಬಸವರಾಜ ಬೊಮ್ಮಾಯಿ

12:15 PM Feb 02, 2022 | Team Udayavani |

ಬೆಂಗಳೂರು: ಫೆ. 7 ರಿಂದ ರಾಜ್ಯ ಬಜೆಟ್ ನ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಬಜೆಟ್ ಕುರಿತು ಟೀಕೆ: ಡಿ.ಕೆ.ಸುರೇಶ್ ಗೆ ಡಾ.ಅಶ್ವತ್ಥ ನಾರಾಯಣ,ರೇಣುಕಾಚಾರ್ಯ ತಿರುಗೇಟು

ನಾಳೆ ದೆಹಲಿ ಪ್ರವಾಸ: ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಬಹುತೇಕವಾಗಿ ನಾಳೆ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next