Advertisement

ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ

03:08 PM Oct 15, 2022 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 2 ವರ್ಷದಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದ ಕನ್ನಡ ರಾಜ್ಯೋತ್ಸವ ವನ್ನು ಸರಳವಾಗಿ ಆಚರಿಸಲಾಗಿತ್ತು. ಪ್ರಸ್ತುತ ಕೋವಿಡ್‌ನ‌ ತಗ್ಗಿರುವುದರಿಂದ ನ. 1ರಂದು ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮವನ್ನು ನಗರದ ಸರ್‌ ಎಂ.ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾ ಗುವುದು ಎಂದು ಜಿಲ್ಲಾಧಿಕಾರಿ ಎನ್‌.ಎಮ್‌. ನಾಗರಾಜ್‌ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಕ್ಕು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ನಾಡಗೀತೆ, ಸಮೂಹ ಗೀತ ಗಾಯನ ಮತ್ತು ನೃತ್ಯ , ಗೌರವ ವಂದನೆ, ಸಾಧಕರಿಗೆ ಸನ್ಮಾನ, ಪೊಲೀಸ್‌ ಕವಾಯತು ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲಾಗುವುದು. ಅಲ್ಲದೆ ನಗರದ ಉಪವಿಭಾಗಾಧಿಕಾರಿ ಕಚೇರಿಯಿಂದ ಬಿ.ಬಿ.ರಸ್ತೆಯ ಮೂಲಕ ಕ್ರೀಡಾಂಗಣದವರೆಗೆ ವಿವಿಧ ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವ ಣಿಗೆ ನಡೆಸಲಾಗುವುದು. ಸ್ಥಳೀಯ ಸಾಹಿತಿಗಳನ್ನು ಒಳಗೊಂಡಂತೆ ಪ್ರಮುಖ ಕನ್ನಡ ಸಾಹಿತಿಗಳ ಭಾವಚಿತ್ರ ಹಾಗೂ ಅವರ ಸಂದೇಶಗಳ ಫಲಕಗ ಳನ್ನು (ಪ್ಲೇಕ್ಸ್‌) ನಗರದ ಪ್ರಮುಖ ವೃತ್ತಗಳಲ್ಲಿ ಅಳವಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ ಮತ್ತು ವಿತರಣೆ, ಆಂಬುಲೆನ್ಸ್‌ ವ್ಯವಸ್ಥೆ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವತ್ಛತೆ ಇನ್ನಿತರೆ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಸಾಪ ಸಹಯೋಗದಲ್ಲಿ ಜಿಲ್ಲೆಯಲ್ಲಿನ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಕುರಿತು, ಕವನ, ಗಾಯನ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಕನ್ನಡ ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯ ಸ್ಥರು ಹಾಗೂ ಪದಾಧಿಕಾರಿಗಳು ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು ಸಲಹೆ ನೀಡಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌ .ನಾಗೇಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್‌ .ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಾ.ಜಿ. ಸಂತೋಷ್‌ ಕುಮಾರ್‌, ಜಿಲ್ಲಾ ಕಸಾಪ ಅಧ್ಯಕ್ಷ ಕೋಡಿರಂಗಪ್ಪ, ತಾಲ್ಲೂಕು ಕಸಾಪ ಅಧ್ಯಕ್ಷ ಎಳುವಳ್ಳಿ ಸೊಣ್ಣೇಗೌಡ, ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಉಷಾ ಶ್ರೀನಿವಾಸ್‌, ತಾಲೂಕು ಅಧ್ಯಕ್ಷರಾದ ಲೀಲಾ ಲಕ್ಷ್ಮೀನಾರಾಯಣ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಲಪತಿಗೌಡ, ಜಿಲ್ಲಾ ರಕ್ಷಣಾ ವೇದಿಕೆ ಅಧ್ಯಕ್ಷ ಶ್ರೀರಾಮೇಗೌಡ, ಚಂದ್ರಶೇಖರ್‌, ಲೋಕೇಶ್‌, ಮಂಚನಬಲೆ ಶ್ರೀನಿವಾಸ್‌, ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next