Advertisement

ಬೈಂದೂರು ತಾಲೂಕು ಕೇಂದ್ರದಲ್ಲಿ ಪ್ರಥಮ ಸ್ವಾತಂತ್ರ್ಯೋತ್ಸವ ಆಚರಣೆಯ ಸಿದ್ಧತೆ

11:23 PM Aug 14, 2019 | Team Udayavani |

ಬೈಂದೂರು: ನೂತನ ತಾಲೂಕು ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ಬೈಂದೂರು ತಾಲೂಕು ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು ಸಿದ್ಧತೆ ಪೂರ್ಣಗೊಂಡಿದೆ.

Advertisement

ಇಲ್ಲಿನ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಪ್ರಥಮ ಬಾರಿಗೆ ಧ್ವಜಾರೋಹಣ ನಡೆಯಲಿದೆ.

ರಾಜ್ಯದಲ್ಲಿ ನೆರೆ ಹಾವಳಿಯಿಂದ ಸಮಸ್ಯೆ ಇರುವ ಕಾರಣ ಸರಕಾರದ ಸುತ್ತೋಲೆಯಂತೆ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ.

ವಿದ್ಯಾರ್ಥಿಗಳು, ಎನ್‌.ಸಿ.ಸಿ., ಪೊಲೀಸ್‌ ಇಲಾಖೆಯಿಂದ ಪಥಸಂಚಲನ ನಡೆಯಲಿದೆ. ಯಡ್ತರೆ ಗ್ರಾಮ ಪಂಚಾಯತ್‌ ವತಿಯಿಂದ ಹೊಸದಾಗಿ ಧ್ವಜಕಟ್ಟೆ ನಿರ್ಮಿಸಲಾಗಿದೆ. ಆ. 14ರಂದು ಬೆಳಗ್ಗೆ ವಿದ್ಯಾರ್ಥಿಗಳು ಪಥಸಂಚಲನದ ತಯಾರಿ ನಡೆಸಿದ್ದಾರೆ. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಧ್ವಜಾರೋಹಣಗೈಯಲಿದ್ದಾರೆ. ಬೆಳಗ್ಗೆ 8.30ಕ್ಕೆ ಧ್ವಜಾರೋಹಣ ನಡೆಯಲಿದೆ.ತಾಲೂಕು ಕೇಂದ್ರದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ತಹಶೀಲ್ದಾರ್‌ಬಿ.ಪಿ. ಪೂಜಾರ್‌ ತಿಳಿಸಿದ್ದಾರೆ.

ಕುಂದಾಪುರ: ಸ್ಯಾತಂತ್ರ್ಯ ಆಚರಣೆ
ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ 73ನೇ ಸ್ವಾತಂತ್ರ್ಯ ಉತ್ಸವದ ಆಚರಣೆ ಆ.15ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಸಹಾಯಕ ಕಮಿಷನರ್‌ ಡಾ| ಎಸ್‌.ಎಸ್‌. ಮಧುಕೇಶ್ವರ್‌ ಧ್ವಜಾರೋಹಣಗೈದು ಸಂದೇಶ ನೀಡಲಿದ್ದಾರೆ. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿ, ವಿಧಾನ ಪರಿಷತ್‌ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಎಸ್‌. ಕುಂದರ್‌, ಪೊಲೀಸ್‌ ಉಪಾಧೀಕ್ಷಕ ಬಿ.ಪಿ. ದಿನೇಶ್‌ ಕುಮಾರ್‌ ಭಾಗವಹಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next