Advertisement
ಇಲ್ಲಿಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶನಿವಾರ ಹರ್ ಘರ್ ತಿರಂಗಾ ಅಭಿಯಾನದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಆ. 13ರಂದು ಬೆಳಗ್ಗೆ 10ಕ್ಕೆ ಶ್ರೀಮಹರ್ಷಿ ವಾಲ್ಮೀಕಿ ವೃತ್ತದಿಂದ ಅರಮನೆ ಮಾರ್ಗವಾಗಿ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ, 14ರಂದು ಹುಣಸಗಿಯಲ್ಲಿ ಬೆಳಗ್ಗೆ 10ಕ್ಕೆ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಭಾರತ ಮಾತೆ ಸ್ತಬ್ಧ ಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
Related Articles
Advertisement
ತಾಪಂ ಇಒ ಚಂದ್ರಶೇಖರ ಪವ್ಹಾರ್ ವೇದಿಕೆಯಲ್ಲಿದ್ದರು. ಬಿಇಒ ಸೀಬಾ ಜಲಿಯನ್ ಸೈಲಸ್, ತಾಲೂಕು ಆರೋಗ್ಯಾಧಿಕಾರಿ ಡಾ| ಆರ್.ವಿ. ನಾಯಕ ಸಲಹೆ ನೀಡಿದರು. ಬಳಿಕ ಶಾಸಕರು ಸಾರ್ವಜನಿಕರಿಗೆ ಧ್ವಜಗಳನ್ನು ವಿತರಿಸಿದರು. ಎಲ್ಲ ಇಲಾಖೆಗಳ ಅಧಿಕಾರಿಗಳು ಇದ್ದರು.
ಮೂರ್ತಿ ಪ್ರತಿಷ್ಠಾಪನೆ: 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ದಕ್ಷಿಣ ಭಾರತದ ನೇತೃತ್ವ ವಹಿಸಿದ್ದ ರಾಜಾ ನಾಲ್ವಡಿ ವೆಂಕಟಪ್ಪನಾಯಕರ ಪಂಚ ಲೋಹದ ಪುತ್ಥಳಿಯನ್ನು ನಾರಾಯಣಪುರ ಬಸವಸಾಗರ ಜಲಾಶಯದ ಮುಂದೆ ಸ್ಥಾಪಿಸಲು ನಿರ್ಧರಿಸಿದ್ದು, ಇದಕ್ಕೆ ಸರಕಾರ ಅನುಮೋದನೆ ನೀಡಿದೆ. ಶೀಘ್ರ ಪುತ್ಥಳಿ ಪ್ರತಿಷ್ಠಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಜೂಗೌಡ ತಿಳಿಸಿದರು.