Advertisement

ಕೆಂಗೇರಿಗೆ ಪ್ರಧಾನಿ ಮೋದಿ ಆಗಮನ; ಮುಖ್ಯಮಂತ್ರಿಗಳಿಂದ ಸಿದ್ಧತಾ ಕಾರ್ಯ ಪರಿಶೀಲನೆ

12:54 PM Jun 18, 2022 | Team Udayavani |

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 20ರಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟದಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು.

Advertisement

ಸಹಕಾರ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಎಸ್.ಟಿ.ಸೋಮಶೇಖರ್ ಅವರು ಸಮಾವೇಶದ ಸಿದ್ಧತಾ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕೋವಿಡ್ ಟೆಸ್ಟ್ ಗೊಂದಲ ವಿಚಾರವಾಗಿ ಸ್ಪಷ್ಟನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಒಳಾಂಗಣ ಸಮಾರಂಭದಲ್ಲಿ ಭಾಗವಹಿಸುವವರು ಕೋವಿಡ್ ಟೆಸ್ಟ್ ಮಾಡಿಸಬೇಕು. ಆದರೆ ಹೊರಾಂಗಣ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿಲ್ಲ. ನಾನೂ ಕೂಡ ಕೋವಿಡ್ ಟೆಸ್ಡ್ ಮಾಡಿಸುತ್ತೇನೆ. ಸಚಿವರೂ ಕೂಡ ಕೋವಿಡ್ ಟೆಸ್ಟ್ ಮಾಡಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಸಂಸದ ಸದಾನಂದ ಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next