Advertisement
ಗೃಹ ಕಚೇರಿ “ಕೃಷ್ಣಾ’ದಲ್ಲಿ ಗುರುವಾರ ಪ್ರವಾಸೋದ್ಯಮ ಇಲಾಖೆಯ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಗುರುತಿ ಸಲಾಗಿರುವ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗಿರುವ ತೊಡಕು ಗಳನ್ನು ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಗಳೊಂದಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ಸೂಚಿಸಿದರು.
ಸಿ.ಟಿ. ರವಿ ಮಾತನಾಡಿ, ಪ್ರವಾಸೋದ್ಯಮ ಬೆಳವಣಿಗೆಗೆ ವಿಪುಲ ಅವಕಾಶಗಳಿರುವ ಜಿಲ್ಲೆ ಗಳನ್ನು ಗುರುತಿಸಿ ಅಲ್ಲಿಗೆ ಅಧಿಕಾರಿಗಳನ್ನು ನಿಯೋಜಿಸಬೇಕು. ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಅಧಿಕಾರಿಗಳಿಲ್ಲದೆ ಪ್ರಗತಿ ಪರಿಶೀಲನೆ ಅಸಾಧ್ಯ ವಾಗಿದೆ. ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶವಿರುವ ಜಿಲ್ಲೆಗಳಲ್ಲಿ ಕೆಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರ ನೀಡುವ ಬಗ್ಗೆಯೂ ಚಿಂತಿಸಬಹುದು ಎಂದರು. ಇಲಾಖೆಗೆ ಪ್ರವಾಸೋದ್ಯಮ ಉತ್ತೇಜನ ಮುಖ್ಯ ಧ್ಯೇಯವಾಗಬೇಕಿದ್ದು, ಅಭಿವೃದ್ಧಿ ತಾಣಗಳ ಗುರುತಿಸುವಿಕೆ, ನಿರ್ವಹಣೆ, ಸಂರಕ್ಷಣೆ ಆದ್ಯತೆಯಾಗಬೇಕು ಎಂದರು. ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ಪಿ. ರವಿಕುಮಾರ್, ಮುಖ್ಯ ಕಾರ್ಯ ದರ್ಶಿ ಟಿ. ಎಂ. ವಿಜಯ ಭಾಸ್ಕರ್, ಪ್ರವಾಸೋ ದ್ಯಮ ಇಲಾಖೆ ಕಾರ್ಯದರ್ಶಿ ಟಿ. ಕೆ. ಅನಿಲ್ ಕುಮಾರ್, ಕೆಎಸ್‌ಟಿಡಿಸಿ ಅಧ್ಯಕ್ಷೆ ಶ್ರುತಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Related Articles
ಕೆಮ್ಮಣ್ಣುಗುಂಡಿ ಹಾಗೂ ನಂದಿ ಬೆಟ್ಟದ ಸಮಗ್ರ ಅಭಿವೃದ್ಧಿ ಹೊಣೆ ಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವುದು, ಬಾದಾಮಿ ಪ್ರವಾಸಿ ತಾಣದ ಅಭಿವೃದ್ಧಿಗೂ ಆದ್ಯತೆ ನೀಡುವುದು, ಅಂತಾರಾಷ್ಟ್ರೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ತಾಣದಲ್ಲಿ ವಿಶ್ವ ದರ್ಜೆಯ ಸೌಲಭ್ಯ ಕಲ್ಪಿಸುವುದು, ಅದಕ್ಕಾಗಿ ಎಪಿಎಂಸಿಗೆ ಸೇರಿದ ಭೂಮಿಯನ್ನು ಕೆಎಸ್‌ಟಿಡಿಸಿಗೆ ಹಸ್ತಾಂತರಿಸಿ ವಾಹನ ನಿಲ್ದಾಣ ಸಹಿತ ಇತರ ಸೌಲಭ್ಯ ಕಲ್ಪಿಸುವುದು. ಶ್ರೀರಂಗಪಟ್ಟಣ, ಮೈಸೂರು ಪ್ರವಾಸಿ ತಾಣ ಅಭಿವೃದ್ಧಿ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು.
Advertisement