Advertisement
ಕುಂತೂರು ಗ್ರಾಮದ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಶ್ರೀ ರಾಜನ್ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮ ಪಂಚಾಯತ್ ರಸ್ತೆ ಇದಾಗಿದ್ದು, ಮಣ್ಣಿನ ರಸ್ತೆಯಾಗಿರುವುದರಿಂದ ಮಳೆಗಾಲದಲ್ಲಿ ಸಂಪೂರ್ಣ ಕೆಸರುಮಯಗೊಂಡಿದೆ. ವಾಹನ ಓಡಾಟಕ್ಕೆ, ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಅವರ ಮೂಲಕ ಮನವಿ ಮಾಡಲಾಗಿತ್ತು.
ಮನವಿಗೆ ಸ್ಪಂದಿಸಿದ ಸಚಿವರು ಕ್ರಿಯಾ ಯೋಜನೆ ತಯಾರಿಸಿ ಕಳುಹಿಸಿಕೊಡುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಜಿ.ಪಂ. ಎಂಜಿನಿಯರ್ ಇಲಾಖೆಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಜಿ.ಪಂ. ಸಹಾಯಕ ಎಂಜಿನಿಯರ್ ಸಂದೀಪ್ ಅವರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದ್ದಾರೆ. ರಸ್ತೆಯ ಉದ್ದ, ಅಳವಡಿಸಬೇಕಾದ ಮೋರಿಗಳ ಲೆಕ್ಕಾಚಾರ ಹಾಕಿ ಒಟ್ಟು 2.70 ಕೋಟಿ ರೂ. ಮೊತ್ತದ ಕ್ರಿಯಾಯೋಜನೆ ತಯಾರಿಸಿದ್ದಾರೆ. ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಅವರು ಎಂಜಿನಿಯರ್ ಅವರಿಗೆ ಪೂರಕ ಮಾಹಿತಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಯಾದವ್ ಬೀರಂತಡ್ಕ, ಮೋನಪ್ಪ ಗೌಡ ಬೀರಂತಡ್ಕ, ಜಿ.ಪಂ. ಎಂಜಿನಿಯರ್ ಭರತ್ ಉಪಸ್ಥಿತರಿದ್ದರು.
Related Articles
Advertisement