Advertisement

ತನಿಖೆ ಕೈಗೊಳ್ಳುವಾಗ ಸೂಕ್ತ ಸಾಕ್ಷ್ಯಾಧಾರ ಕಲೆಹಾಕಿ

01:12 PM Aug 17, 2019 | Team Udayavani |

ತುಮಕೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಖಾಸಗಿ ವಸತಿ, ವಿದ್ಯಾರ್ಥಿ ನಿಲಯಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಒದಗಿಸುವುದು ಆಯಾ ವಸತಿ ನಿಲಯಗಳ ಮುಖ್ಯಸ್ಥರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಎಚ್ಚರಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಶುಕ್ರವಾರ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಕ್ಕಳ ರಕ್ಷಣಾ ಸಮಿತಿ ಸಭೆಯಲ್ಲಿ ಮಾತ ನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು, ಸೂಕ್ತ ಸಾಕ್ಷ್ಯಾ ಧಾರಗಳಿಲ್ಲದೆ ಆರೋಪಿಗಳು ಖುಲಾಸೆ ಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಳ್ಳುವಾಗ ಸೂಕ್ತ ಸಾಕ್ಷ್ಯಾಧಾರ ಕಲೆಹಾಕಬೇಕು ಎಂದು ಸೂಚಿಸಿದರು.

ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಫ‌ಲಕ ಹಾಗೂ ಸಮಸ್ಯೆ, ದೂರುಗಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಒಳಗೊಂಡ ಪೋಸ್ಟರ್‌ ಶಾಲಾ- ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳ ಸೂಚನಾ ಫ‌ಲಕಗಳಲ್ಲಿ ಅಳವಡಿಸಬೇಕು .

ತಿಪಟೂರು ಗ್ರಾಮಾಂತರದಲ್ಲಿ ಅಪ್ರಾಪ್ತ ಹೆಣ್ಣು ಮಗುವಿನ ಮೇಲೆ ನಡೆದಿರುವ ದೌರ್ಜನ್ಯ ಕುರಿತು ಕೂಡಲೇ ಪೋಷಕರ ಸಂಪರ್ಕಿಸಿ ಆರೋಪಿ ಮೇಲೆ ದೂರು ದಾಖಲಿಸುವಂತೆ ಸೂಚಿಸಿದರು. ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಗಳಲ್ಲಿ ಮಕ್ಕಳು ಮಂಡಿಸಿದ ಬೇಡಿಕೆಗಳ ವಿವರ ಪಡೆದ ಜಿಲ್ಲಾಧಿಕಾರಿ ನೀರಿನ ವ್ಯವಸ್ಥೆ, ಶೌಚಗೃಹ ವ್ಯವಸ್ಥೆ, ಆಟದ ಮೈದಾನ ಸೇರಿ ಮೂಲಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು. ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳು ಹಾಗೂ ಪೋಷಕರಿಗೆ ಆಪ್ತ ಸಮಾಲೋಚಕರಿಂದ ಹಾಗೂ ಲೀಗಲ್ ಕಂ ಪ್ರೊಬೇಷನ್‌ ಅಧಿಕಾರಿಗಳಿಂದ ಸಮಾಲೋಚನೆ ನಡೆಸಬೇಕು. ಒಂದು ವರ್ಷ ಮೇಲ್ಪಟ್ಟ ಪ್ರಕರಣಗಳಿದ್ದರೆ ಕೂಡಲೇ ಇತ್ಯರ್ಥಗೊಳಿಸುವಂತೆ ಹೇಳಿದರು.

ಡಿಎಚ್ಒ ಡಾ. ಚಂದ್ರಿಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್‌. ನಟರಾಜ್‌ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next