Advertisement

ವಿಮಾನ ನಿಲ್ದಾಣಕ್ಕೆ ಡಿಪಿಆರ್‌ ಸಿದ್ಧಪಡಿಸಿ: ಸವದಿ

07:14 PM Sep 18, 2020 | Suhan S |

ರಾಯಚೂರು: ಯರಮರಸ್‌ ಸರ್ಕ್ನೂಟ್‌ ಹೌಸ್‌ ಹತ್ತಿರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆಂದು ಈ ಹಿಂದೆಯೇ 422 ಎಕರೆ ಸ್ಥಳ ಮೀಸಲಿಟ್ಟಿದ್ದು, ಕೂಡಲೇ ವಿಸ್ತೃತ ಯೋಜನೆ ವರದಿ ಸಿದ್ಧಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಜಿಲ್ಲಾಧಿಕಾರಿಗೆ ಸೂಚಿಸಿದರು.

Advertisement

ಉದ್ದೇಶಿತ ವಿಮಾನ ನಿಲ್ದಾಣ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿಮಾನ ನಿಲ್ದಾಣ ನಿರ್ಮಾಣಕ್ಕೆ 200 ಕೋಟಿ ರೂ. ಅಗತ್ಯವಿದೆ. ಈಗಾಗಲೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 40 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಉಳಿದ ಅನುದಾನ ರಾಜ್ಯ-ಕೇಂದ್ರ ಸರ್ಕಾರದಿಂದ ಭರಿಸಲು ಕ್ರಮ ಕೈಗೊಳ್ಳಲಾಗುವುದು. ಈ ದಿಸೆಯಲ್ಲಿ ಜಿಲ್ಲಾಧಿ ಕಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪೂರಕ ಸಿದ್ಧತೆ ಆರಂಭಿಸಬೇಕು. ಡಿಸಿ ಖಾತೆಯಲ್ಲಿ ಇರುವ ಅನುದಾನದಲ್ಲಿಯೇ ಕಾಮಗಾರಿ ಪ್ರಾರಂಭಿಸುವಂತೆ ನಿರ್ದೇಶನ ನೀಡಿದರು.

ಬರುವ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ, ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳು,ಅನುದಾನ ಬಿಡುಗಡೆ ಸೇರಿದಂತೆ ಹಲವು  ವಿಷಯಗಳ ಕುರಿತು ಚರ್ಚಿಸಿ ಜಿಲ್ಲೆಯ ಅಭಿವೃದ್ಧಿ ಶಕೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿ ಕಾರಿ ಆರ್‌. ವೆಂಕಟೇಶ ಕುಮಾರ್‌ ಮಾತನಾಡಿ, ಯರಮರಸ್‌ ಬಳಿ ವಿಮಾನ ನಿಲ್ದಾಣಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಇಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಸ್ಥಳ ಪರಿಶೀಲಿಸಲು ಆಗಮಿಸಿದ್ದ ಕೇಂದ್ರದ ಏರ್‌ ಟ್ರಾಫಿಕ್‌ ಅಧಿಕಾರಿಗಳು, ವಿಮಾನ ನಿಲ್ದಾಣ ನಿರ್ಮಾಣಕ್ಕೆ ವೈಟಿಪಿಎಸ್‌ ಚಿಮಣಿಗಳು ಅಡ್ಡಿಯಾಗಲಿವೆ. ಮುಖ್ಯವಾಗಿ 2 ಟವರ್‌ಗಳು ಅಡ್ಡ ಬರುತ್ತಿವೆ, ಅದರಿಂದ ಸಮಸ್ಯೆ ಆಗಲಿದೆ ಎಂದು ತಿಳಿಸಿದ್ದರು ಎಂದರು. ಸಮಸ್ಯೆ ಏನೇ ಬರಲಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತಿರ್ಮಾನ ತೆಗೆದುಕೊಳ್ಳಲಾಗುತ್ತದೆ. ಮೊದಲಿಗೆ ನಿಮ್ಮಲ್ಲಿರುವ ಅನುದಾನದಲ್ಲಿ ಕಾಮಗಾರಿ ಆರಂಭಿಸುವಂತೆ ಸಚಿವರು ನಿರ್ದೇಶನ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next