Advertisement

ಸ್ವಚ್ಛ ಸರ್ವೇಕ್ಷಣ್‌-2018 ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ 

12:10 PM Sep 15, 2017 | Team Udayavani |

ಮೈಸೂರು: 2018ರ ಜನವರಿಯಲ್ಲಿ ಸ್ವಚ್ಛ ಸರ್ವೇಕ್ಷಣ್‌ ಆರಂಭವಾಗಲಿದ್ದು, ನಗರ ಸ್ಥಳೀಯ ಸಂಸ್ಥೆಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಂಡಲ್ಲಿ ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆಯಲ್ಲಿ ಉತ್ತಮ ಶ್ರೇಯಾಂಕ ಗಳಿಸಬಹುದು ಎಂದು ಮೈಸೂರು ಮಹಾ ನಗರ ಪಾಲಿಕೆ ಆಯುಕ್ತ ಜಿ.ಜಗದೀಶ್‌ ತಿಳಿಸಿದರು.

Advertisement

ನಗರದಲ್ಲಿ ಗುರುವಾರ ರಾಜ್ಯ ನಗರಾಭಿವೃದ್ಧಿ ಸಂಸ್ಥೆ, ಆಡಳಿತ ತರಬೇತಿ ಸಂಸ್ಥೆ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಚ್ಛ ಸರ್ವೇಕ್ಷಣೆ -2018 ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆಯ ಪ್ರಶ್ನಾವಳಿಯಲ್ಲಿನ ಪ್ರತಿಯೊಂದು ಪ್ರಶ್ನೆಗಳಿಗೂ ಅಂಕ ಹಂಚಿಕೆ ಮಾಡಿಕೊಂಡು ಒಟ್ಟಾರೆ ಗಳಿಸಿರುವ ಅಂಕಗಳ ಆಧಾರದ ಮೇಲೆ ನಗರ ಸ್ಥಳೀಯ ಸಂಸ್ಥೆಯ ಸ್ಥಾನವನ್ನು ಈಗಿನಿಂದಲೇ ತಿಳಿದುಕೊಳ್ಳಬಹುದಾಗಿದೆ.

ನಗರ ಸ್ಥಳೀಯ ಸಂಸ್ಥೆಯು ಯಾವ ಅಂಶದಲ್ಲಿ ಹಿಂದುಳಿದಿದೆ ಎಂಬುದನ್ನು ತಿಳಿದುಕೊಂಡು ಆಯಾ ಅಂಶಗಳಲ್ಲಿ ನಿರೀಕ್ಷಿತ ಮಟ್ಟಕ್ಕೆ ತಲುಪಲು ಬೇಕಾದ ಕ್ರಮ ತೆಗೆದುಕೊಳ್ಳಬಹುದು ಎಂದು ಹೇಳಿದರು. ಕಾರ್ಯಾಗಾರ ಸಂಯೋಜಕ ಮಲ್ಲಿಕಾರ್ಜುನ, ಕೇಂದ್ರ ಸಂಪನ್ಮೂಲ ವ್ಯಕ್ತಿ ಜಿ.ವೆಂಕಟೇಶ್‌ ಕಡಗದಕೈ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next