ಬಳ್ಳಾರಿ: ಕೋವಿಡ್ ಮಹಾಮಾರಿಗೆ ಕಡಿವಾಣ ಹಾಕುವ ಕೋವಿಡ್ ವ್ಯಾಕ್ಸಿನ್ ಶೀಘ್ರದಲ್ಲಿಯೇ ದೇಶದಲ್ಲಿ ಲಭ್ಯವಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಲಸಿಕೆಯನ್ನು ಸಮರ್ಪಕವಾಗಿ ಕೋಲ್ಡ್ ಸ್ಟೋರೇಜ್‌ನಲ್ಲಿಸಂಗ್ರಹ, ವಿತರಣೆ ಮತ್ತು ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಲಭ್ಯವಾದ ತಕ್ಷಣ ಪ್ರಥಮ ಹಂತವಾಗಿ ಸರ್ಕಾರಿ ಮತ್ತು ಖಾಸಗಿ ವೈದ್ಯರು ಹಾಗೂವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ17682 ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ ಸರ್ಕಾರಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ 13680 ಮತ್ತು ಖಾಸಗಿ ವೈದ್ಯಕೀಯ ಸಿಬ್ಬಂದಿ4002 ನೋಂದಾಯಿಸಲಾಗಿದ್ದು, ಇನ್ನೂ 281 ಜನ ವೈದ್ಯಕೀಯ ಸಿಬ್ಬಂದಿ ತತ್‌ಕ್ಷಣ ನೋಂದಣಿಗೆ ಕ್ರಮಕೈಗೊಳ್ಳಬೇಕು. ಕೋವಿಡ್‌ವ್ಯಾಕ್ಸಿನ್ ನೀಡುವ ಸಂದರ್ಭದಲ್ಲಿ ನಮ್ಮಹೆಸರಿಲ್ಲ. ಉದ್ದೇಶಪೂರ್ವಕವಾಗಿ ಕೈಬಿಟ್ಟಿದ್ದಾರೆ ಎಂಬ ಆರೋಪಗಳಿಗೆ ಅಸ್ಪದ ನೀಡಬಾರದು ಎಂದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಅನಿಲಕುಮಾರ್ ಮಾತನಾಡಿ, ಕೋವಿಡ್ ಲಸಿಕೆ ಇದೇ ಡಿಸೆಂಬರ್ 25ರಂದು ಘೋಷಣೆಯಾಗುವ ಸಾಧ್ಯತೆ ಇದೆ. ಲಸಿಕೆಯನ್ನು ಸಮರ್ಪಕವಾಗಿಸಂಗ್ರಹಿಸುವುದಕ್ಕೆ ಕೋಲ್ಡ್ ಸ್ಟೊರೇಜ್ ವ್ಯವಸ್ಥಹಾಗೂ ಲಸಿಕೆ ಸಮರ್ಪಕವಾಗಿ ವಿತರಣೆಗೆ ಮತ್ತು ಚಿಕಿತ್ಸೆ ನೀಡುವುದಕ್ಕೂ ವ್ಯವಸ್ಥೆಮಾಡಿಕೊಳ್ಳಲಾಗಿದ್ದು, ಲಸಿಕೆ ಬಂದ ತಕ್ಷಣಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿಗೆ 10ದಿನದೊಳಗೆ ಲಸಿಕೆ ನೀಡಲಾಗುವುದು ಎಂದರು.
2ನೇ ಹಂತದಲ್ಲಿ ಪೊಲೀಸ್ ಸಿಬ್ಬಂದಿ, ಗೃಹರಕ್ಷಕದಳ, ನಗರ ಸ್ಥಳೀಯ ಸಂಸ್ಥೆಗಳಕಾರ್ಮಿಕರು ಹಾಗೂ ಫ್ರಂಟ್‌ಲೆçನ್ ಕೋವಿಡ್ ವಾರಿಯರ್ಗಳಿಗೆ ಲಸಿಕೆನೀಡಲು ಉದ್ದೇಶಿಸಲಾಗಿದೆ. 3ನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಹಾಗೂ 50 ವರ್ಷದೊಳಗೆ ಕೋಮೊರ್ಬಿಡಿಟಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.
ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿ: ಜ. 17ರಂದು ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರನಡೆಯಲಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಹಾಗೂ ಯಾವುದೇ ಕಾರಣಕ್ಕೂ ಮಕ್ಕಳು ಇದರಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಇದಕ್ಕೆ ಎಲ್ಲ ಸಿದ್ಧತೆಗಳು ಮಾಡಿಕೊಳ್ಳಬೇಕು. ಇನ್ನಿತರೆ ಇಲಾಖೆಗಳು ಅಗತ್ಯ ಸಹಕಾರವನ್ನು ಆರೋಗ್ಯ ಇಲಾಖೆಗೆ ನೀಡಬೇಕು ಎಂದು ಡಿಸಿ ಎಸ್.ಎಸ್.ನಕುಲ್ ತಿಳಿಸಿದರು.
ವಿವಿಧ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಈ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು. ಈಟ್ ರೈಟ್ ಇಂಡಿಯಾ(ಬಳ್ಳಾರಿ)ಗೆ ಸಂಬಂಧಿ ಸಿದಂತೆ ಆಹಾರ ಸುರಕ್ಷತೆ ಅಧಿ ಕಾರಿಗಳೊಂದಿಗೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ನಕುಲ್ ಅವರು ಅಗತ್ಯ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ನೀಡಿದರು.
ಈ ಸಂದರ್ಭದಲ್ಲಿ ವಿಮ್ಸ್ ನಿರ್ದೇಶಕ ಡಾ| ದೇವಾನಂದ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಜನಾರ್ದನ್ ಸೇರಿದಂತೆ ವಿವಿ ಇಲಾಖೆಗಳ ಅಧಿಕಾರಿಗಳು ಇದ್ದರು.