Advertisement

ಬೇಸಿಗೆಯಲ್ಲಿ ನೀರು, ಮೇವಿಗೆ ಸಜ್ಜಾಗಿ

07:25 AM Jan 29, 2019 | Team Udayavani |

ಚಾಮರಾಜನಗರ: ಬರಲಿರುವ ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಉದ್ಬವಿಸದಂತೆ ಅಧಿಕಾರಿ ಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳ ಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಬರ ಪರಿಸ್ಥಿತಿ ಹಾಗೂ ಇಲಾಖೆಗಳ ಕಾರ್ಯ ಕ್ರಮ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬರಗಾಲದ ಸಂದರ್ಭದಲ್ಲಿ ಸಾಮಾನ್ಯ ವಾಗಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಅಭಾವ ಕಾಣಿಸಿಕೊಳ್ಳುತ್ತದೆ. ಸದ್ಯಕ್ಕೆ ಜಿಲ್ಲೆಯಲ್ಲಿ ತೀವ್ರತರವಾದ ಸಮಸ್ಯೆ ಕಂಡು ಬಾರದೆ ಇರಬಹುದು. ಆದರೆ, ಮುಂದಿನ ದಿನಗಳಲ್ಲಿ ಉದ್ಬವಿಸಬಹುದಾದ ಯಾವುದೇ ಸಮಸ್ಯೆಗಳು ಕಾಡದಂತೆ ಅಧಿಕಾರಿಗಳು ಈಗಿನಿಂದಲೇ ಎಚ್ಚರಿಕೆ ಕ್ರಮ ತೆಗೆದುಕೊಳ್ಳ ಬೇಕೆಂದರು.

ಈಗಲೇ ಕ್ರಮವಹಿಸಿ: ಫೆಬ್ರವರಿ-ಮಾರ್ಚ್‌ ನ‌ಲ್ಲಿ ಕುಡಿಯುವ ನೀರು ಸಮಸ್ಯೆ ಎದು ರಾಗಲಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಅಷ್ಟಾಗಿ ಸಮಸ್ಯೆ ಕಂಡು ಬರುವುದಿಲ್ಲ. ಆದರೆ, ಯೋಜನೆಗೆ ಒಳಪಡದ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ವಹಿಸಬೇಕೆಂದರು.

ವಿಳಂಬ ಬೇಡ: ಈಗಾಗಲೇ ಆರಂಭಿಸಿರುವ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕೊಳವೆ ಬಾವಿಗಳ, ಪೈಪ್‌ಲೈನ್‌ ಕೆಲಸಗಳನ್ನು ವಿಳಂಬ ಮಾಡದೇ ಪೂರ್ಣಗೊಳಿಸ‌ಬೇಕು. ಸಮಸ್ಯಾತ್ಮಕ ಗ್ರಾಮಗಳಲ್ಲಿ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮೀಣ ಮತ್ತು ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಪರಿಹಾರ ಕಾಮಗಾರಿಗಳಿಗೆ ಗಮನ ನೀಡಬೇಕೆಂದು ಉಸ್ತುವಾರಿ ಸಚಿವರು ಸೂಚಿಸಿದರು.

ಮೇವು ದಾಸ್ತಾನು: ಜಿಲ್ಲೆಯಲ್ಲಿ ಮೇವು ದಾಸ್ತಾನು ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಮೇವು ಸಂಗ್ರಹಣೆ ಮಾಡುವಾಗ ಉದಾಸೀನ ಮಾಡಬಾರದು. ಸಂಗ್ರಹಿಸಿದ ಮೇವು ಸರಿಯಾದ ಕ್ರಮದಲ್ಲಿ ದಾಸ್ತಾನು ಮಾಡದಿದ್ದರೆ ಹಾಳಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಮೇವು ಸಂಗ್ರಹಣೆ ಎಷ್ಟು ಮುಖ್ಯವೋ ವೈಜ್ಞಾನಿಕವಾಗಿ ದಾಸ್ತಾನು ಮಾಡುವುದು ಸಹ ಅಷ್ಟೇ ಮುಖ್ಯ ಎಂದು ತಿಳಿಸಿದರು.

Advertisement

ಕಾಲುಬಾಯಿ ಜ್ವರ ಸೇರಿದಂತೆ ಯಾವುದೇ ರೋಗಗಳು ಜಾನುವಾರುಗಳಲ್ಲಿ ಕಂಡು ಬಾರದ ಹಾಗೆ ಔಷಧೋಚಾಪಾರ‌ಗಳನ್ನು ನೀಡಬೇಕು. ಔಷಧಗಳ ಕೊರತೆ ಕಾಡ ಬಾರದು. ಯಾವುದೇ ದೂರುಗಳಿಗೆ ಅವಕಾಶ ವಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದರು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬಿತ್ತನೆ ಬೀಜ ಗೊಬ್ಬರ ಇತರೆ ಸೌಲಭ್ಯಗಳು ಸಕಾಲದಲ್ಲಿ ಸಿಗುವಂತಾಗಬೇಕು.

ರೈತರ ಬೇಡಿಕೆ ಅನುಸಾರ ಪೂರೈಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳವಂತೆ ಅವರು ಸೂಚಿಸಿದರು. ಜಿಪಂ ಅಧ್ಯಕ್ಷೆ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಪಂ ಸಿಇಒ ಡಾ.ಕೆ.ಹರೀಶ್‌ ಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next