Advertisement

ಸ್ವಾತಂತ್ರ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ

11:30 AM Jul 19, 2019 | Team Udayavani |

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ಆ.15ರಂದು ನಗರದಲ್ಲಿ ಆಚರಿಸಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ ಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕ್ರೀಡಾಂಗಣ ಸಿದ್ಧಪಡಿಸಿ: ಎಂದಿನಂತೆ ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣ ಹಾಗೂ ಸುತ್ತಮುತ್ತಲ ಆವರಣದ ನೈರ್ಮಲ್ಯ ಕೆಲಸವನ್ನು ನಗರಸಭೆ ಶೀಘ್ರವೇ ಆರಂ ಭಿಸಬೇಕು. ನೀರು ಸಿಂಪಡಿಸಿ ಕಾರ್ಯ ಕ್ರಮಕ್ಕೆ ಕ್ರೀಡಾಂಗಣ ಸಿದ್ಧಪಡಿಸುವ ಕೆಲಸ ಮುಂಚಿತವಾಗಿ ಯೇ ಪೂರ್ಣಗೊಳಿಸಿರಬೇಕು ಎಂದರು.

ಅಚ್ಚುಕಟ್ಟಾಗಿ ವೇದಿಕೆ ನಿರ್ಮಿಸಿ: ನಾಗರಿಕರು, ಗಣ್ಯರು, ಮಕ್ಕಳಿಗೆ ನೆರಳಿಗಾಗಿ ಉತ್ತಮ ಶಾಮಿ ಯಾನ, ಆಸನಗಳ ವ್ಯವಸ್ಥೆ ಮಾಡಬೇಕು. ವೇದಿಕೆ ಯನ್ನು ಅಚ್ಚುಕಟ್ಟಾಗಿ ನಿರ್ಮಿಸಬೇಕು. ಹೂವಿನ ಅಲಂಕಾರ ಸೇರಿದಂತೆ ಇತರೆ ಸಿದ್ಧತೆ ಸಮರ್ಪ ಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ: ಆಕರ್ಷಕ ಪಥ ಸಂಚಲನಕ್ಕಾಗಿ ಶಾಲಾ ತಂಡಗಳನ್ನು ಆಯ್ಕೆ ಮಾಡಬೇಕು. ಅಲ್ಲದೆ ಮಕ್ಕಳಿಂದ ಸ್ವಾತಂತ್ರ್ಯ ದಿನ ಆಚರಣೆಯ ಮಹತ್ವ ಸಂದೇಶ ಸಾರುವ ಆಕರ್ಷಕ ಕಾರ್ಯಕ್ರಮವನ್ನು ಆಯೋಜಿಸ ಬೇಕು. ಸಂಜೆ ಚಾಮರಾಜೇಶ್ವರ ದೇವಾಲಯ ಬಳಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲು ಕನ್ನಡ ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ತೆಗೆದು ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

Advertisement

ಅಗತ್ಯ ಸಿದ್ಧತೆ ಕೈಗೊಳ್ಳಿ:ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು ನಡೆಸಲು ವಿದ್ಯಾರ್ಥಿಗಳಿಗೆ ಸೂಕ್ತ ಸಮಯ ನಿಗದಿ ಮಾಡಬೇಕು. ಯಾವುದೇ ತೊಂದರೆಯಾಗದಂತೆ ತಾಲೀಮು ಸಂದರ್ಭದಲ್ಲೂ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರು.

ವಿವಿಧ ಸಮಿತಿ ರಚನೆ: ಕಾರ್ಯಕ್ರಮ ಸುಗಮ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ಪ್ರತ್ಯೇಕ ಸಭೆ ನಡೆಸಿ ಕೈಗೊಳ್ಳಬೇಕಿರುವ ಕೆಲಸಗಳ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ರಾಷ್ಟ್ರೀಯ ಕಾರ್ಯ ಕ್ರಮವನ್ನು ಯಶಸ್ವಿಗೊಳಿಸಲು ಪ್ರತಿ ಇಲಾಖೆ ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿ ಕಾರಿ ನಿರ್ದೇಶನ ನೀಡಿದರು.

ಎಲ್ಲ ಕಚೇರಿಗಳಲ್ಲಿ ಧ್ವಜಾರೋಹಣ: ಸಭೆಯಲ್ಲಿ ಭಾಗವಹಿಸಿದ್ದ ಸಂಘಟನೆಗಳ ಮುಖಂಡರು ಪ್ಲಾಸ್ಟಿಕ್‌ ಧ್ವಜಗಳ ಬಳಕೆ ಮತ್ತು ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಕಾರ್ಯ ಕ್ರಮಗಳಿಗೆ ಸರ್ಕಾರಿ ಶಾಲೆಯ ಮಕ್ಕಳಿಗೆ ಆದ್ಯತೆ ನೀಡಬೇಕು. ಬ್ಯಾಂಕುಗಳು ಸೇರಿದಂತೆ ಎಲ್ಲ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿ ಸಬೇಕು. ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜ ನೆಯಾಗಬೇಕು ಎಂದು ಸಲಹೆ ನೀಡಿದರು.

ಎಲ್ಲರ ಸಹಕಾರ ಮುಖ್ಯ: ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮಾತನಾಡಿ ಮುಖಂಡರು ನೀಡಿರುವ ಸಲಹೆಗಳನ್ನು ಪರಿಗಣಿಸಲಾಗುವುದು. ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್‌, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ, ಸಂಘಟನೆಗಳ ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ, ನಾಗೇಂದ್ರ, ನಿಜಧ್ವನಿ ಗೋವಿಂದರಾಜು, ಚಾ.ಗು. ನಾಗ ರಾಜು, ಜಿ. ಬಂಗಾರು, ಶಿವಣ್ಣ, ಬ್ಯಾಡಮೂಡ್ಲು ಬಸವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಚನ್ನಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next