Advertisement
ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಕ್ರಿಯ ಕ್ಷಯರೋಗ ಪತ್ತೆ ಹಚ್ಚುವ ಆಂದೋಲನದ ಜಿಲ್ಲಾ ಮಟ್ಟದ ಇಲಾಖೆಗಳ ಸಮನ್ವಯ ಸಮಿತಿಯ ಪೂರ್ವಭಾವಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು2020ರ ಡಿ.1ರಿಂದ 31ರವರೆಗೆ ಹಮ್ಮಿಕೊಂಡಿದ್ದು, 2025ರ ವೇಳೆಗೆ ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ ಎಂದು ತಿಳಿಸಿದರಲ್ಲದೆ, ವಾರಕ್ಕೆ ಒಂದು ಕಾರ್ಯಕ್ರಮದಂತೆವೇಳಾಪಟ್ಟಿ ತಯಾರಿಸಿ ಸಪ್ತಾಹದಂತೆ ಆಂದೋಲನ ಯಶಸ್ವಿಗೊಳಿಸಿ ಎಂದು ತಿಳಿಸಿದರು.
Related Articles
Advertisement
ಔಷಧಿ ಅಂಗಡಿಗಳು ಭಾಗಿ: ಜಿಲ್ಲಾ ಕ್ಷಯರೋಗ ನಿಯಂತ್ರಣ ಘಟಕದ ಸಂಚಾಲಕಿ ಶಕೀಲಾ ಮಾತನಾಡಿ, ಒಂದು ತಿಂಗಳುನಡೆಯುವ ಕಾರ್ಯಕ್ರಮ ಇದಾಗಿದ್ದು,9,82,072 ಜನಸಂಖ್ಯೆ ತಲುಪುವ ಗುರಿ ಹೊಂದಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಸಂಘ-ಸಂಸ್ಥೆಗಳನ್ನೊಳಗೊಂಡ 447 ಗುಂಪು ರಚಿಸಲಾಗಿದೆ ಹಾಗೂ ಕ್ಷಯರೋಗದಆಂದೋಲನದಲ್ಲಿ ಎಂವಿಜೆ ಮತ್ತು ಆಕಾಶ್ ಮೆಡಿಕಲ್ ಕಾಲೇಜು, ಖಾಸಗಿ ಔಷಧಿ ಅಂಗಡಿ ಯವರು ಭಾಗವಹಿಸಲಿದ್ದಾರೆ ಎಂದರು.ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಕ್ಷಯ ರೋಗಿಗಳಿಗೆ ಕ್ಷ-ಕಿರಣ ಪರೀಕ್ಷೆಯನ್ನುಉಚಿತವಾಗಿ ಮಾಡುವ ಮೂಲಕ ಸಹಕಾರ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾ ದೇವಿ, ನೆಲಮಂಗಲ ಹಾಗೂ ಹೊಸಕೋಟೆ ತಾಲೂಕು ಆರೋಗ್ಯಾಧಿಕಾರಿಗಳು, ಆಕಾಶ್ ಮೆಡಿಕಲ್ ಕಾಲೇಜು ಹಾಗೂ ಎಂ.ವಿ.ಜೆ ಆಸ್ಪತ್ರೆ ವೈದ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎನ್‌ಎಸ್‌ಎಸ್, ಶಾಲಾ ಕಾಲೇಜು ಪ್ರಾಂಶುಪಾಲರು, ಸಂಘ ಸಂಸ್ಥೆಯವರು ಉಪಸ್ಥಿತರಿದ್ದರು.