Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪ್ರಸಕ್ತ ಮುಂಗಾರು ಪ್ರವಾಹ, ಅತಿವೃಷ್ಟಿ ಎದುರಿಸಲು ಮುಂಜಾಗ್ರತಾ ಕ್ರಮಗಳ ಪೂರ್ವಸಿದ್ಧತೆಗಾಗಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಜಂಟಿ ಸರ್ವೇ ಕೈಗೊಂಡು ತ್ವರಿತವಾಗಿ ದಾಖಲಿಸಬೇಕು. ಪಂಚಾಯತ್ ರಾಜ್ ವಿಭಾಗದ ಹಾನಿಯಾದ ರಸ್ತೆಗಳ ವರದಿ ಸಲ್ಲಿಸಿದರೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು. ಅದೇ ರೀತಿ, ರಾಷ್ಟ್ರೀಯ ಹೆದ್ದಾರಿ ಕೂಡು ರಸ್ತೆಗಳಲ್ಲಿ ನೀರು ನಿಂತು ಸಮಸ್ಯೆಯಾಗಿದ್ದರೆ ದೂರುಗಳು ಬರುವ ಮೊದಲೇ ರಿಪೇರಿ ಮಾಡಿಸಬೇಕು. ಈ ಎಲ್ಲ ಕಾರ್ಯಗಳನ್ನು ಉಪವಿಭಾಗಾಧಿಕಾರಿಗಳು ಪರಿಶೀಲನೆ ಮಾಡಬೇಕು ಹಾಗೂ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನಗಳಲ್ಲಿಯೇ ವಾಸವಿರಬೇಕೆಂದು ಸೂಚಿಸಿದರು.
ಜಿಪಂ ಸಿಇಒ ಮಹಮ್ಮದ ರೋಷನ್ ಮಾತನಾಡಿ, ಮನೆಗಳ ಹಾನಿ ಪ್ರದೇಶಕ್ಕೆ ಆಯಾ ತಹಶೀಲ್ದಾರ್‌ರು ಭೇಟಿ ನೀಡಿ ಪರಿಶೀಲನೆ ನಡಸಬೇಕು. ಮನೆಗಳ ಹಾನಿ ಸರ್ವೇಗೆ ಲೋಕೊಪಯೋಗಿ ಇಲಾಖೆಯಿಂದ ಎಂಜಿನಿಯರ್‌ಗಳನ್ನು ನಿಯೋಜಿಸಬೇಕು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಪಿಡಿಒಗಳು ಗ್ರಾಮೀಣ ಪ್ರದೇಶದಲ್ಲಿ ಚರಂಡಿ ಹಾಗೂ ಓವರ್ ಹೆಡ್ ಟ್ಯಾಂಕ್‌ಗಳನ್ನು ಸ್ವತ್ಛ ಮಾಡಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ 869 ಹೆಕ್ಟೇರ್ ಕೃಷಿ ಹಾಗೂ 402 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ|ಎನ್.ತಿಪ್ಪೇ ಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ ಕುಮಾರ ಸಂತೋಷ್, ಸವಣೂರ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಪಲ್ಲವಿ ಸಾತೇನಹಳ್ಳಿ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ರಾಜೀವ ಕೂಲೇರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎಚ್.ಎಸ್.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಹಾವೇರಿ ತಹಶೀಲ್ದಾರ್ ಎನ್.ಬಿ.ಗೆಜ್ಜಿ ಸೇರಿದಂತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಹಾವೇರಿ ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ವಿವಿಧ ತಾಲೂಕುಗಳ ತಹಶೀಲ್ದಾರ್‌ರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮೇ ತಿಂಗಳಲ್ಲಿ ಸತತ ಮಳೆಯಿಂದ ಹಾನಿಯಾದ ಮನೆಗಳ ಸಮೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ, ಯಾವುದೇ ಲೋಪದೋಷವಿಲ್ಲದಂತೆ ಬಹಳ ಜಾಗೃತಿಯಿಂದ ಫೈಲ್ ಸಿದ್ಧಪಡಿಸಿ ಗುರುವಾರದೊಳಗೆ ಸಲ್ಲಿಸಬೇಕು. ಎನ್ ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಶನಿವಾರದೊಳಗೆ ಕನಿಷ್ಟ ಪರಿಹಾರ ಹಣ ಪಾವತಿ ಮಾಡಿ, ಜಾಯಿಂಟ್ ಖಾತೆ ಸಮಸ್ಯೆ ಇರುವ ಮನೆಗಳ ಹಾನಿ ಪರಿಹಾರ ನಂತರ ಪಾವತಿಸಬೇಕು. -ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ