Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 20 ಪರೀಕ್ಷಾ ಜಿಲ್ಲೆಯ ಒಟ್ಟು 124 ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಗಮವಾಗಿ ಹಾಗೂ ಕಟ್ಟುನಿಟ್ಟಾಗಿ ನಡೆಯಬೇಕು. 13,309 ರೆಗ್ಯುಲರ್, 2372 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 339 ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು 16,020 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಗಾಳಿ, ಬೆಳಕಿನ ವ್ಯವಸ್ಥೆ, ಆಸನದ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ನಕಲು ತಡೆಗಟ್ಟಲು ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರ, ಕಾರಿಡಾರ್ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾವನ್ನು ಕಡ್ಡಾಯವಾಗಿ ಅಳವಡಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪ್ರತಿ ವಿಷಯದ ಪರೀಕ್ಷೆಗಳಿಗೂ ಆಯಾ ವಿಷಯದ ಶಿಕ್ಷಕರನ್ನು ಹೊರತುಪಡಿಸಿ
ಬೇರೆ ವಿಷಯದ ಶಿಕ್ಷಕರನ್ನು ಪರೀಕ್ಷಾ ಕೊಠಡಿಯ ಮೇಲ್ವಿಚಾರಕರನ್ನಾಗಿ ನೇಮಿಸಬೇಕು. ಯಾವುದೇ ಪರೀಕ್ಷಾ ಕೇಂದ್ರದಲ್ಲಿ ನಕಲು ಅಥವಾ ಇನ್ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ ದೂರುಗಳು ಬಂದಲ್ಲಿ ಸಂಬಂಧಪಟ್ಟ ಕೊಠಡಿಯ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
Related Articles
Advertisement
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶೋಭಾ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ನಕಲು ಪ್ರಕರಣಗಳು ಹಾಗೂ ಇತರೆ ವಿಷಯಗಳ ಆಧಾರದಲ್ಲಿ ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಪರಿಗಣಿಸಲಾಗಿದೆ. ಈ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸುವುದರ ಜೊತೆಗೆ ಪ್ರತ್ಯೇಕವಾಗಿ ಹಿರಿಯ ಅಧಿಕಾರಿಗಳನ್ನೊಳಗೊಂಡ ಜಾಗೃತ ದಳವನ್ನು ನಿಯೋಜಿಸಲಾಗುವುದು.ವಿನೋತ್ ಪ್ರಿಯಾ, ಜಿಲ್ಲಾಧಿಕಾರಿ.