Advertisement
ಹಳೆಯ ಪ್ರವಾಸಿ ಬಂಗಲೆಯನ್ನು ದುರಸ್ತಿಗೊಳಿಸುವ ಸಲುವಾಗಿ ಪರಿಶೀ ಲನೆಗೆ ಆಗಮಿಸಿದ್ದ ಜಿ.ಪಂ. ಅಧಿಕಾರಿಗಳು ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ದುರಸ್ತಿಗೆ ಯೋಗ್ಯವಾಗಿಲ್ಲ ಎಂದು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಬರಬೇಕಿದೆ ಎಂದು ಜಿ.ಪಂ.ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಭರತ್ ಬಿ.ಎಂ. ಅವರು ತಿಳಿಸಿದ್ದಾರೆ.
ಒಂದು ಕಾಲದಲ್ಲಿ ಅತ್ಯಂತ ಚಟುವಟಿಕೆಯ ತಾಣವಾಗಿದ್ದ ಈ ಪ್ರವಾಸಿ ಬಂಗಲೆ ಇದೀಗ ಯಾವುದೇ ಚಟುವಟಿಕೆಗಳಿಲ್ಲದೆ ಅನಾಥವಾಗಿದೆ. ಕಡಬದ ಕೊಡುಗೈ ದಾನಿ ಎಂದೇ ಹೆಸರು ಪಡೆದಿರುವ ದಿ|ಮೇಲೂರು ಚಂದಯ್ಯ ಶೆಟ್ಟಿ ಅವರು 1925ನೇ ಇಸವಿಯಲ್ಲಿ ಈ ಕಟ್ಟಡವನ್ನು ನಿರ್ಮಿಸಿಕೊಟ್ಟಿrರುವ ಬಗ್ಗೆ ಲಭ್ಯ ದಾಖಲೆಗಳಲ್ಲಿ ಉಲ್ಲೇಖವಿದೆ. ಬಂಗಲೆ ಇರುವ ಜಮೀನು ಸೇರಿದಂತೆ ಒಟ್ಟು 2.29 ಎಕರೆ ಜಮೀನನ್ನು ಅವರು ಅಂದಿನ ಕಾಲದಲ್ಲಿ ಸರಕಾರಿ ಆಸ್ಪತ್ರೆಗೆ ದಾನವಾಗಿ ಕೊಟ್ಟಿದ್ದರು. ಸಮುದಾಯ ಆಸ್ಪತ್ರೆಯ ಆವರಣದಲ್ಲಿರುವ ಈ ಕಟ್ಟಡ ಆರಂಭದಲ್ಲಿ ವೈದ್ಯಾಧಿಕಾರಿಗಳ ವಸತಿ ಗೃಹವಾಗಿತ್ತು. ಪುತ್ತೂರು ಬಿಡಿಒ ಕಚೇರಿ ಇದರ ನಿರ್ವಹಣೆಯನ್ನು ನೋಡಿ ಕೊಳ್ಳುತ್ತಿತ್ತು. ಅನಂತರ 2 ಕೊಠಡಿಗಳನ್ನು ಸೇರಿಸಿ ಪುನಶ್ಚೇತನಗೊಳಿಸಿ ಈ ಕಟ್ಟಡ ವನ್ನು ಪ್ರವಾಸಿ ಬಂಗಲೆಯಾಗಿ ಪರಿವರ್ತಿ ಸಲಾಗಿತ್ತು. ಇತ್ತೀಚಿನ ಕೆಲವು ವರ್ಷ ಗಳಲ್ಲಿ ತಾ.ಪಂ., ಗ್ರಾ.ಪಂ. ಆಡಳಿತ ಇದರ ನಿರ್ವಹಣೆಯ ಹೊಣೆ ಹೊತ್ತು ಕೊಂಡಿತ್ತಾದರೂ ಈಗ ಈ ಕಟ್ಟಡ ವನ್ನು ಯಾರೂ ಕೇಳುವ ವರಿಲ್ಲ ದಂತಾ ಗಿದೆ. ಮೂಲತಃ ಸರಕಾರಿ ಸಮುದಾಯ ಆಸ್ಪತ್ರೆಗೆ ಸೇರಿದ ಈ ಜಮೀನನ್ನು ಮತ್ತೆ ಆಸ್ಪತ್ರೆಯ ಉಪಯೋಗಕ್ಕೆ ನೀಡಬೇಕೆಂದು ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿಯವರ ಮುಖಾ ಂತರ ಜಿ.ಪಂ.ಗೆ ಮನವಿ ಸಲ್ಲಿಸಲಾಗಿದೆ. ಮುಂದೆ ಸಮುದಾಯ ಆಸ್ಪತ್ರೆಯು ತಾ| ಆಸ್ಪತ್ರೆಯಾಗಿ ಉನ್ನತೀ ಕರಣ ವಾಗ ಬೇಕಿರುವುದರಿಂದ ಹೆಚ್ಚಿನ ಜಾಗದ ಅಗತ್ಯವಿರುವುದರಿಂದ ಸಂಬಂಧ ಪಟ್ಟವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕಿದೆ.
Related Articles
ಕಡಬದಲ್ಲಿ ಲೋಕೋಪಯೋಗಿ ಇಲಾಖೆಗೆ ಗುರುತಿಸಲಾದ ಜಮೀನಿನಲ್ಲಿ ನಿರೀಕ್ಷಣ ಮಂದಿರ ನಿರ್ಮಿಸಲಾಗುವುದು. ಕಟ್ಟಡದ ವಿನ್ಯಾಸ ನಕ್ಷೆ ಸಿದ್ಧಪಡಿಸಲಾಗಿದ್ದು, ಶೀಘ್ರ ಅನುದಾನಕ್ಕಾಗಿ ಅಂದಾಜುಪಟ್ಟಿ ಸಲ್ಲಿಸಲಾಗುವುದು. ಸುಳ್ಯ ಹಾಗೂ ಕಡಬದಲ್ಲಿ ನೂತನ ನಿರೀಕ್ಷಣ ಮಂದಿರ ನಿರ್ಮಾಣದ ಬಗ್ಗೆ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಜತೆ ಮಾತುಕತೆ ನಡೆಸಲಾಗಿದ್ದು, ಶೀಘ್ರ ಅನುದಾನ ಬಿಡುಗಡೆಯಾಗಲಿದೆ.
-ಎಸ್.ಅಂಗಾರ, ಸುಳ್ಯ ಶಾಸಕ
Advertisement
ನಾಗರಾಜ್ ಎನ್.ಕೆ.