Advertisement

ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಸಿದ್ಧತೆ

12:09 PM Sep 02, 2017 | Team Udayavani |

ಬೆಂಗಳೂರು: ಮಾಸಿಕ ಆರು ಸಾವಿರ ರೂ. ನಿಗದಿತ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಇಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್‌ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆ ಸಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. 

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ,  ನೆರೆಯ ರಾಜ್ಯ ತೆಲಂಗಾಣದಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ 6 ಸಾವಿರ ರೂ. ವೇತನ ನಿಗದಿಗೊಳಿಸಲಾಗಿದೆ. ತ್ರಿಪುರ, ಸಿಕ್ಕಿಂ ಹಾಗೂ ಕೇರಳದಲ್ಲಿಯೂ ಇದೇ ವೇತನ ನೀಡಲಾಗುತ್ತಿದ್ದು, ರಾಜ್ಯ ದಲ್ಲೂ ಜಾರಿ ಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಸೆಪ್ಟೆಂಬರ್‌ 7 ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಹೋರಾಟ ನಡೆಸಲಾಗು ವುದು. 20 ಸಾವಿರ ಆಶಾ ಕಾರ್ಯಕರ್ತೆಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕಳೆದ ವರ್ಷ ಪ್ರತಿಭಟನೆ ನಡೆಸಿದಾಗ ಎಲ್ಲ ಭರವಸೆಗಳನ್ನು ನಿವಾರಣೆ ಮಾಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ, ಈವರೆಗೆ ಈಡೇರಿಸಿಲ್ಲ. ವೇತನ ನೀಡಲು ಜಾರಿಗೊಳಿಸಿರುವ “ಆಶಾ ಸಾಫ್ಟ್ ಪೋರ್ಟಲ್‌’ ಕೆಲಸ ಮಾಡಿದರೂ ಕಾರ್ಯಕರ್ತೆಯರಿಗೆ ವೇತನ ಕಡಿತವಾಗುತ್ತಿದೆ.

ಹೀಗಾಗಿ ಕೂಡಲೇ ಈ ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಗ್ರಾಮೀಣ ಹಾಗೂ ನಗರದ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ನಿಯೋಜನೆ ಮಾಡಿಕೊಂಡ ನಂತರದಲ್ಲಿ ರಾಜ್ಯದಲ್ಲಿ ಶಿಶು ಹಾಗೂ ಗರ್ಭಿಣಿಯರ ಮರಣ ಪ್ರಮಾಣ ಕಡಿಮೆಯಾಗಿದೆ. ಆದರೆ, ಆಶಾ ಕಾರ್ಯಕರ್ತೆಯರಿಗೆ ಮಾತ್ರ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.  ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್‌ ಯಾದಗಿರಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next