Advertisement
ಚುನಾವಣಾಧಿಕಾರಿಗಳು ಹಾಗೂ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಜಂಟಿ ನೇತೃತ್ವದಲ್ಲಿ ಶನಿವಾರ ನಡೆದ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ತಪಾಸಣೆ ಕಾರ್ಯದ ಬಳಿಕ ಅವರು ಮಾತನಾಡಿದರು.
Related Articles
Advertisement
ಇನ್ನು ಗೆಲುವಿನ ಅಂತರ ಅಂಚೆ ಮತಗಳಿಗಿಂತ ಕಡಿಮೆ ಇದ್ದರೆ ಮತ್ತೂಮ್ಮೆ ಅಂಚೆ ಮತಪತ್ರ ಎಣಿಕೆ ಮಾಡಲಾಗುವುದು. ಮತ ಎಣಿಕೆ ವೇಳೆ ಆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕೊಠಡಿಯ ಸ್ಥಳಾವಕಾಶದ ಆಧಾರದ ಮೇಲೆ ಚುನಾವಣಾ ಅಭ್ಯರ್ಥಿಯ ಏಜೆಂಟ್‌ಗಳಿಗೆ ಸ್ಥಳಾವಕಾಶ ಮಾಡಿಕೊಡಲಾಗುತ್ತದೆ. ಮೊದಲಿಗೆ ರಾಷ್ಟ್ರೀಯ ಪಕ್ಷದ ಏಜೆಂಟ್, ನಂತರ ರಾಜ್ಯ ಹಾಗೂ ಸ್ಥಳೀಯ ಪಕ್ಷಗಳಿಗೆ, ಪಕ್ಷೇತರರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಲಾಟರಿ ಮೂಲಕ ಆಯ್ದ ವಿವಿ ಪ್ಯಾಟ್‌ಗಳ ಮತಚೀಟಿ ಎಣಿಕೆ: ಇವಿಎಂ ಮತಗಳ ಎಣಿಕೆ ಮುಗಿದ ನಂತರ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಇವಿಎಂ ಫಲಿತಾಂಶದೊಂದಿಗೆ ವಿವಿ ಪ್ಯಾಟ್ ಚೀಟಿಗಳ ಫಲಿತಾಂಶ ತಾಳೆ ಮಾಡಿ ನೋಡಲಾಗುತ್ತದೆ. ಇದಕ್ಕಾಗಿ ವಿಧಾನಸಭಾ ಕ್ಷೇತ್ರವಾರು ತಲಾ 5 ಮತಗಟ್ಟೆಗಳ ಮತಯಂತ್ರಗಳನ್ನು ಎಲ್ಲಾ ಪಕ್ಷ ಏಜೆಂಟ್‌ಗಳ ಸಮ್ಮುಖದಲ್ಲಿಯೇ ಲಾಟರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇವಿಎಂಗಳಲ್ಲಿನ ಮತಗಳು ವಿವಿ ಪ್ಯಾಟ್‌ನ ಮತಗಳ ನಡುವೆ ವ್ಯಾತ್ಯಾಸ ಬಂದರೆ ಅಂತಿಮವಾಗಿ ವಿವಿ ಪ್ಯಾಟ್‌ಗಳಲ್ಲಿನ ಮತಗಳನ್ನೇ ಪರಿಗಣಿಸಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.
ಮತ ಏಣಿಕೆ ವಿಡಿಯೋ ಸಿಡಿ ಅಭ್ಯರ್ಥಿಗಳಿಗೆ: ಚುನಾವಣಾ ಆಯೋಗದ ನಿರ್ದೇಶನದಂತೆ ಈ ಬಾರಿ ಮತ ಎಣಿಕೆ ಸಂದರ್ಭದಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆ ಕೊಠಡಿಗಳ ಕಾರ್ಯಚಟುವಟಿಕೆಯನ್ನು ಸಂಪೂರ್ಣವಾಗಿ ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ. ಫಲಿತಾಂಶದ ಬಳಿಕ ಅದನ್ನು ಸಿ.ಡಿ ಮಾಡಿಸಿ, ಆ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ತಲುಪಿಸಲಾಗುತ್ತದೆ.