Advertisement
ನಗರದ ಸರಕಾರಿ ಪದವಿ ಪೂರ್ವ ವಿದ್ಯಾಲಯದಲ್ಲಿನ ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ಕೊಠಡಿಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಒಂದೇ ಸ್ಥಳದಲ್ಲಿ ನಡೆಯಲಿದೆ. ಸುರಪುರ ಮತ್ತು ಶಹಾಪುರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು ಕಾಲೇಜಿನ ಕೆಳ ಮಹಡಿಯಲ್ಲಿ ನಡೆಯಲಿದ್ದು, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮೊದಲನೇ ಮಹಡಿಯಲ್ಲಿ ಜರುಗಲಿದೆ. ಯಾದಗಿರಿ ಕ್ಷೇತ್ರದ ಮತ ಎಣಿಕೆ ಕಾಲೇಜಿನ ಹೊಸ ಕಟ್ಟಡದಲ್ಲಿ ನಡೆಯಲಿದೆ ಎಂದರು.
ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕರು ಹಾಗೂ ಕೇಂದ್ರ ಭದ್ರತಾ ಪಡೆ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದ ವಾಹನ ಮತ್ತು ವ್ಯಕ್ತಿಗಳಿಗೆ ಪ್ರವೇಶ ಇಲ್ಲ.
Related Articles
Advertisement
ಬೆಳಗ್ಗೆ 8:00 ಗಂಟೆಗೆ ಅಂಚೆ ಮತಪತ್ರಗಳ ಎಣಿಕೆ ನಡೆಯಲಿದೆ. ಈ ಸಮಯದೊಳಗೆ ಬರುವ ಎಲ್ಲಾ ಅಂಚೆ ಪತ್ರಗಳನ್ನೂ ಎಣಿಕೆ ಮಾಡಲಾಗುವುದು. ನಂತರ ಬರುವ ಅಂಚೆ ಮತಪತ್ರಗಳನ್ನು ಪರಿಗಣಿಸುವುದಿಲ್ಲ. ತದನಂತರ 8:30ರಿಂದ ಕಂಟ್ರೋಲ್ ಯುನಿಟ್ ಮತ ಎಣಿಕೆ ಆರಂಭವಾಗಲಿದೆ. ಕೊನೆಯಲ್ಲಿ ರ್‍ಯಾಂಡಮ್ ಆಗಿ ಆಯ್ಕೆ ಮಾಡಲಾದ ಮತಗಟ್ಟೆಯ ಒಂದು ಮತದಾನ ಖಾತ್ರಿ ಯಂತ್ರ (ವಿವಿ ಪ್ಯಾಟ್)ದ ಸ್ಲಿಪ್‌ಗಳನ್ನು ಎಣಿಕೆ ಮಾಡಲಾಗುವುದು ಎಂದು ಅವರು ವಿವರಿಸಿದರು.
ಧ್ವನಿವರ್ಧಕದಲ್ಲಿ ಫಲಿತಾಂಶ: ಮತ ಎಣಿಕೆಯ ಕೇಂದ್ರದ ಸುತ್ತ ಧ್ವನಿವರ್ಧಕಗಳನ್ನು ಅಳವಡಿಸಲಾಗಿದ್ದು, ನಾಲ್ಕು ವಿಧಾನಸಭಾ ಕ್ಷೇತ್ರಗಳ ಪ್ರತಿ ಸುತ್ತಿನ ಫಲಿತಾಂಶವನ್ನು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಅವರು ತಿಳಿಸಿದರು.
ಅಭಿನಂದನೆ: ಜಿಲ್ಲೆಯ 1,129 ಮತಗಟ್ಟೆಗಳಲ್ಲಿ ಶಾಂತಿಯುವಾಗಿ ಮತದಾನ ನಡೆದಿದೆ. ಇದಕ್ಕೆ ಕಾರಣಿಕರ್ತರಾದ ಎಲ್ಲಾ ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪ ಚುನಾವಣಾಧಿ ಕಾರಿಯಾದ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ನಾಲ್ಕು ವಿಧಾನಸಭಾ ಕ್ಷೇತ್ರಗಳ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ| ಬಿ.ಎಸ್. ಮಂಜುನಾಥ ಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು