Advertisement
ಸಮಾರಂಭ ನಡೆಯುವ ರಂಗಮಂದಿರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲಿ ನಿರ್ಮಿಸಲಾಗಿರುವ ವೇದಿಕೆ, ಹಾಕಲಾಗಿರುವ ಅಸನಗಳ ಅಳವಡಿಕೆ ಕಾರ್ಯವನ್ನು ವೀಕ್ಷಿಸಿದರು. ವೇದಿಕೆಗೆ ಸಂಬಂಧಿಸಿದ ಪೂರಕವಾದ ಇತರೆ ಸಿದ್ಧತೆಗಳನ್ನು ವ್ಯಾಪಕವಾಗಿ ಪರಿಶೀಲಿಸಿದರು.
Related Articles
Advertisement
ಮುಖ್ಯಮಂತ್ರಿಯವರು ಭೇಟಿ ನೀಡಲಿರುವ ಮಲೆ ಮಹದೇಶ್ವರ ಕ್ಷೇತ್ರದ ಸ್ಥಳಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರು ಬೇಟಿ ನೀಡಿದರು. ಪ್ರಾಧಿಕಾರದ ಸಭೆ ನಡೆಯಲಿರುವ ನಾಗಮಲೆ ಭವನದ ಸಭಾಂಗಣಕ್ಕೂ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಪೂರ್ವಸಿದ್ದತೆಗಳನ್ನು ಪರಿಶೀಲಿಸಿದರು.
ನಾಗಮಲೆ ಭವನದ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕಾರ್ಯಕ್ರಮ ಸಂಬಂಧ ಸಮಾಲೋಚನೆ ನಡೆಸಿದ ಜಿಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿಯವರ ಭೇಟಿ ಕಾರ್ಯಕ್ರಮ ಸಂಬಂಧ ಕೈಗೊಂಡಿರುವ ಎಲ್ಲಾ ವ್ಯವಸ್ಥೆಗಳ ಸಂಪೂರ್ಣ ವಿವರ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಶಿಷ್ಠಾಚಾರ ಪಾಲನೆಯಾಗಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದ ಹಾಗೇ ಅಚ್ಚು ಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲಾ ಅವಶ್ಯ ಸಿದ್ಧತೆಗಳನ್ನು ಕೈಗೊಳ್ಳಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಮಗದೇಶ್ವರ ಬೆಟ್ಟದ ಕ್ಷೇತ್ರಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜವರೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಇಂದು ಜಿಲ್ಲೆಗೆ ಸಿಎಂ ಬಿಎಸ್‌ವೈ ಭೇಟಿ
ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ ಅವರು ಬುಧವಾರ, ಗುರುವಾರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಬುಧವಾರ ಸಂಜೆ 4 ಕ್ಕೆ ಮುುಖ್ಯಮಂತ್ರಿಯವರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ನಂತರ ಮಲೆ ಮಹದೇಶ್ವರಸ್ವಾಮಿ ದರ್ಶನ ಪಡೆಯುವರು. 4.30 ಕ್ಕೆ ಸಾಲೂರು ಮಠಕ್ಕೆ ಭೇಟಿ ನೀಡುವರು. 5 ಕ್ಕೆ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ ವಾಸ್ತವ್ಯ ಹೂಡುವರು.
ಗುರುವಾರ ಬೆಳಗ್ಗೆ 8.30 ಕ್ಕೆ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವರು. 9 ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸುತ್ತೂರು ಮಠದ ಶಾಖೆಗೆ ಭೇಟಿ ನೀಡುವರು.10.15ಕ್ಕೆ ಪ್ರಾಧಿಕಾರದ ಸಭಾಂಗಣದಲ್ಲಿ ಸಂವಿಧಾನ ದಿನಾಚಾರಣೆ ಅಂಗವಾಗಿ ಭಾರತದ ಸಂವಿಧಾನದ ಪ್ರಸ್ತಾವನೆ ಓದುವುದು ಕಾರ್ಯಕ್ರಮದಲ್ಲಿ ಭಾಗವಹಿಸುವರು.
10.30 ಕ್ಕೆ ಮಹದೇಶ್ವರ ಬೆಟ್ಟದಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು, ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ನಿರ್ಮಿಸಲು ಉದ್ದೇಶಿಸಿರುವ ಪಾದಚಾರಿ ಮೆಟ್ಟಿಲುಗಳ ಯೋಜನೆ, ಭಕ್ತಾದಿಗಳ ಕ್ಯೂ ಲೈನ್ ನಿರ್ಮಾಣ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸುವರು. ಮಧ್ಯಾಹ್ನ 12ಕ್ಕೆ ಬೆಂಗಳೂರಿಗೆ ತೆರಳುವರು.
ಮುಖ್ಯಮಂತ್ರಿಯವರ ಜತೆ ಉಪಮುಖ್ಯಮಂತ್ರಿ, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್, ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಸಚಿವ ಕೋಟ ಶ್ರೀನಿವಾಸಪೂಜಾರಿ ಸಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ಲೋಕೋಪಯೋಗಿ ಇಲಾಖೆ ಹಾಗೂ ಪ್ರಾಧಿಕಾರದ ವತಿಯಿಂದ1384.10 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಂಡು ಲೋಕಾರ್ಪಣೆ ಸಿದ್ಧವಾಗಿದೆ. ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ರಾಧಿಕಾರದ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಪ್ರಾಧಿಕಾರದ ವತಿಯಿಂದ 10993 ಲಕ್ಷ ರೂ.ಗಳ ವೆಚ್ಚದಲ್ಲಿ ಶಂಕುಸ್ಥಾಪನೆಗೆ ಸಿದ್ಧಗೊಂಡಿವೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಗಳಿಗೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ತಿಳಿಸಿದ್ದಾರೆ.