Advertisement
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಬ್ಟಾಗಿಲು ವೀರನಹೊಸಳ್ಳಿ ಗೇಟ್‌ನಿಂದ ಸುಮಾರು ಅರ್ಧ ಕಿ.ಮೀ. ದೂರದ ಜಂಗಲ್ ಇನ್ ರೆಸಾರ್ಟ್ ಪಕ್ಕದ ಖಾಸಗಿಯವರ ಭೂಮಿಯಲ್ಲಿ ವಿಶಾಲವಾದ ಪೆಂಡಾಲ್ ನಿರ್ಮಿಸಲಾಗುತ್ತಿದೆ. ಈಗಾಗಲೇ ಭೂಮಿಯನ್ನು ಸಮತಟ್ಟು ಮಾಡಲಾಗಿದೆ.ವಾಹನಗಳ ಪಾರ್ಕಿಂಗ್‌ಗೆ ಪ್ರತ್ಯೇಕ ಜಾಗ ಸಿದ್ಧಗೊಳಿಸಲಾಗುತ್ತಿದೆ. ಮುಖ್ಯ ರಸ್ತೆಯಲ್ಲಿ ಗಜಗಳ ಪಯಣಕ್ಕೆ ಭರದ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ರಸ್ತೆ ಬದಿ ತೆರವು: ವೀರನಹೊಸಳ್ಳಿ ಗೇಟ್‌ನಿಂದ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಮೂರನೇ ಬ್ಲಾಕ್‌ವರೆಗಿನ ಸುಮಾರು 3.ಕಿ.ಮೀ. ವರೆಗಿನ ಎರಡು ಬದಿಯ ಬೆಳೆದು ನಿಂತಿರುವ ಗಿಡಗಂಟಿಗಳನ್ನು ತೆರವುಗೊಳಿಸಲಾಗುತ್ತಿದೆ. ರಸ್ತೆಯ ಮೋರಿಗಳಿಗೆ ಸುಣ್ಣ-ಬಣ್ಣ ಬಳಿಯಲಾಗುತ್ತಿದೆ.
Related Articles
ಮೈಸೂರು: ಮೈಸೂರು ಅರಮನೆ ಮಂಡಳಿವತಿಯಿಂದ ಸೆ.3ರಂದು ಬೆಳಗ್ಗೆ 11ಗಂಟೆಗೆ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ನಾಡಹಬ್ಬ 2018ರ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡದ ಅಂಬಾರಿ ಆನೆ ಅರ್ಜುನ ನೇತೃತ್ವದ ಆರು ಆನೆಗಳಿಗೆ ಸ್ವಾಗತ ನೀಡಲಾಗುವುದು.
Advertisement
ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ ಅವರ ಘನ ಉಪಸ್ಥಿತಿಯಲ್ಲಿ ಗಜಪಡೆಗೆ ಸ್ವಾಗತ ನೀಡಲಾಗುವುದು. ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸುವರು. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್, ಸಂಸದರಾದ ಪ್ರತಾಪ್ ಸಿಂಹ, ಧ್ರುವನಾರಾಯಣ, ಮೈಸೂರು ಮಹಾನಗರಪಾಲಿಕೆ ಮೇಯರ್ ಬಿ.ಭಾಗ್ಯವತಿ, ಉಪಮೇಯರ್ ಇಂದಿರಾ, ಜಿಪಂ ಅಧ್ಯಕ್ಷೆ ನಯಿಮಾಸುಲ್ತಾನ, ಶಾಸಕರಾದ ಅಡಗೂರು ಎಚ್.ವಿಶ್ವನಾಥ್, ತನ್ವೀರ್ ಸೇಠ್ಠ, ಕೆ.ಮಹದೇವ್, ಎಲ್.ನಾಗೇಂದ್ರ, ಡಾ.ಯತೀಂದ್ರ, ಅಶ್ವಿನ್ ಕುಮಾರ್, ಹರ್ಷವರ್ಧನ್, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಆರ್.ಧರ್ಮಸೇನ, ಕೆ.ವಿ. ನಾರಾಯಣಸ್ವಾಮಿ, ಜಿಪಂ ಉಪಾಧ್ಯಕ್ಷ ಜಿ.ನಟರಾಜ್, ಮೈಸೂರು ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ತಾಪಂ ಉಪಾಧ್ಯಕ್ಷ ಎನ್ .ಬಿ.ಮಂಜು ಭಾಗವಹಿಸಲಿದ್ದಾರೆ.