Advertisement
ಜೂನ್ ತಿಂಗಳಲ್ಲಿ ನಡೆಯಲಿರುವ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಎಲ್ಲ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಆದರೆ ಪರೀಕ್ಷೆಯ ವೇಳಾಪಟ್ಟಿ ಇನ್ನೂ ಪ್ರಕಟಿಸಿಲ್ಲ. ನಾಲ್ಕನೇ ಹಂತದ ಲಾಕ್‌ಡೌನ್ ಸಡಿಲವಾದ ಅನಂತರ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಪರೀಕ್ಷಾ ಕೇಂದ್ರದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಬೋಧಕ, ಬೋಧಕೇತರ ವರ್ಗ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಸಂಸ್ಥೆ ಆವರಣ, ಕೊಠಡಿ, ಪರೀಕ್ಷಾ ಕೊಠಡಿ, ಶೌಚಾಲಯ, ನೀರು ಸಂಗ್ರಹಣ ಟ್ಯಾಂಕ್ ಹಾಗೂ ಸುತ್ತಲಿನ ಪರಿಸರ ಸ್ವತ್ಛವಾಗಿಡಬೇಕು. ವಿದ್ಯಾರ್ಥಿ ಹಾಗೂ ಸಿಬಂದಿ ವರ್ಗಕ್ಕೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪರೀಕ್ಷಾ ಬರುವ ವಿದ್ಯಾರ್ಥಿ, ಪ್ರಾಧ್ಯಾಪಕರು ಸ್ಯಾನಿಟೈಸರ್ ಬಳಸಬೇಕು. ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿರುತ್ತದೆ. ಸಾಮಾಜಿಕ ಅಂತರವನ್ನು ಪಾಲಿಸಬೇಕು. ವಿಶ್ವ ಆರೋಗ್ಯ ಸಂಸ್ಥೆ, ಸರಕಾರಗಳು ಹಾಗೂ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಪಾಲಿಸಬೇಕು ಎಂದು ಸೂಚಿಸಿದೆ.