Advertisement
ಅವರು ಸೋಮವಾರ ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಪ್ರಧಾನಿ ಆಗಮನ ಕುರಿತಾಗಿ ಪೂರ್ವಸಿದ್ಧತೆ, ಸಮಾಲೋಚನೆ ನಡೆಸಿ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ದ್ದೇಶಿಸಿ ಮಾತನಾಡಿದರು. ನ. 10ರಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಪರಿವರ್ತನಾ ರ್ಯಾಲಿ ಬೆಳ್ತಂಗಡಿಗೆ ಆಗಮಿಸಲಿದೆ. ಅದನ್ನೂ ಯಶಸ್ವಿ ಮಾಡಿಕೊಡಬೇಕು ಎಂದರು. ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ತಾಲೂಕು ಅಧ್ಯಕ್ಷ ರಂಜನ್ ಜಿ. ಗೌಡ ಮೊದಲಾದವರು ಉಪಸ್ಥಿತರಿದ್ದರು.
ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಹೆಲಿಪ್ಯಾಡ್‌ನಿಂದ ಮುಖ್ಯರಸ್ತೆಗೆ ಸಂಪರ್ಕ ರಸ್ತೆಯ ನಿರ್ಮಾಣ ಕೂಡ ನಡೆದಿದೆ. ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಪ್ರಸಾದ್ ಅಜಿಲ ಹಾಗೂ ಸಹಾಯಕ ಎಂಜಿನಿಯರ್ ತೌಸೀಫ್ ಅವರು ಮೇಲುಸ್ತುವಾರಿ ವಹಿಸಿದ್ದರು. ಆಗಮಿಸುವ ಸಾವಿರಾರು ವಾಹನ ಗಳ ಪಾರ್ಕಿಂಗ್‌ಗೆ ಕೂಡ ವಿವಿಧೆಡೆ ಜಾಗ ಗೊತ್ತು ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಭದ್ರತೆ ಕುರಿತು ಸಮಾಲೋಚನೆ ನಡೆಸಿದರು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಮೊದಲಾದವರ ಜತೆ ಸಂಸದರು ಹಾಗೂ ಅಧಿಕಾರಿಗಳು ಸಮಾಲೋಚನೆ ನಡೆಸಿದರು. ಸಂಸದರ ಜತೆ ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಹರೀಶ್ ಪೂಂಜಾ, ತಾ.ಪಂ. ಮಾಜಿ ಸದಸ್ಯ ರತ್ನವರ್ಮ ಜೈನ್ ಮೊದಲಾದವರಿದ್ದರು.