Advertisement

ಶಾಲೆ ಆರಂಭಕ್ಕೆ ಸಿದ್ಧತೆ : ನಾಗೇಶ್‌

12:12 AM Aug 19, 2021 | Team Udayavani |

ಬೆಂಗಳೂರು: ಪ್ರೌಢಶಾಲೆಯ 9 ಮತ್ತು 10ನೇ ತರಗತಿ ಭೌತಿಕ ತರಗತಿಗಳನ್ನು ಆ.23ರಿಂದ ಆರಂಭಿಸಲು  ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್‌ ಹೇಳಿದರು.

Advertisement

ಶಾಲೆ ಪುನರಾರಂಭದ ಪೂರ್ವಸಿದ್ಧತೆ ಪರಿಶೀಲನೆಗೆ ಬುಧವಾರ ಬೆಂಗಳೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವೀಡಿಯೊ ಕಾನ್ಫರೆನ್ಸ್‌ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಶಾಲೆ ಆವರಣದಲ್ಲಿ ಶುಚಿತ್ವ ಕಾಪಾಡುವುದು ಅತಿ ಮುಖ್ಯವಾಗಿದೆ. ಶೌಚಗೃಹ, ಶಾಲಾ ಆವರಣ, ಕೊಠಡಿಗಳು ಸಹಿತ ಎಲ್ಲ ಕಡೆ ಶುಚಿತ್ವ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಆಯಾ ಶಾಲೆಗಳ ಮುಖ್ಯಶಿಕ್ಷಕರು ಮತ್ತು ಶಿಕ್ಷಕರದ್ದಾಗಿದೆ ಎಂದರು.

ಶಾಲೆಗಳಲ್ಲಿ ಸುರಕ್ಷಾ ಕ್ರಮಗಳು ಪರಿಪಾಲನೆಯಾಗುತ್ತಿರುವ ಕುರಿತು ಬಿಇಒಗಳು ತಮ್ಮ ವ್ಯಾಪ್ತಿಯ ಕನಿಷ್ಠ ಶೇ.50ರಷ್ಟು ಶಾಲೆಗಳಿಗಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಕೊಠಡಿ ಕೊರತೆಯಾದರೆ ಸಿಬಂದಿ ಕೊಠಡಿ ಬಳಸಿಕೊಳ್ಳಬೇಕು. ಈ ಮೂಲಕ ಶಾಲೆಗಳ ಪುನರಾರಂಭ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಆರಂಭಿಸಿದ ಬಳಿಕ ಬರುವ ಪ್ರತಿಕ್ರಿಯೆಗಳು 1ರಿಂದ 8ನೇ ತರಗತಿವರೆಗಿನ ಶಾಲೆ ಪುನರಾರಂಭಿಸಲು ನೆರವಾಗುತ್ತವೆ. ರಾಜ್ಯದ ಎಲ್ಲ ಗ್ರಾಮ, ಪಟ್ಟಣ, ತಾಲೂಕು, ನಗರಗಳಲ್ಲಿ ವಯೋಮಿತಿ ಸಹಿತ ಕೋವಿಡ್‌ ಪ್ರಕರಣಗಳ ಮಾಹಿತಿಯನ್ನು ಪಡೆದುಕೊಳ್ಳಬೇಕು.  ಇದರಿಂದ 1ರಿಂದ 8ನೇ ತರಗತಿ ಶಾಲೆ ಆರಂಭಿಸಲು ಸೂಕ್ತ ಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next