Advertisement
ಗಣರಾಜ್ಯೋತ್ಸವದ ದಿನದಂದು ಬೆಳಗ್ಗೆ 7ರಿಂದ 8:30ರ ವರೆಗೆ ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಆಯಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು.
Related Articles
Advertisement
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ದಳದವರಿಂದ ಬೆಂಕಿ ಆರಿಸುವ ಪ್ರಾಯೋಗಿಕ ಕಾರ್ಯಕ್ರಮ ಹಾಗೂ ಪೊಲೀಸ್ ಇಲಾಖೆಯಿಂದ ಶ್ವಾನದಳ ಕಲೆಗಳನ್ನು ಪ್ರದರ್ಶಿಸಬೇಕು. ಈ ಬಾರಿ ಸರ್ಕಾರಿ ನೌಕರರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗುತ್ತಿದ್ದು, ಆಯ್ಕೆಯಾದ ಆರು ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನಿಸಲಾಗುವುದು.
ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವದ ಮುಖ್ಯ ಸಮಾರಂಭಕ್ಕೆ ಹಾಗೂ ಸಂಜೆ ರಂಗಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು.
ಗಣರಾಜ್ಯೋತ್ಸವ ಅಂಗವಾಗಿ ನೆರವೇರಿಸಲಾಗುವ ಧ್ವಜಾರೋಹಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಹಾಗೂ ರಾಷ್ಟ್ರಧ್ವಜಕ್ಕೆ ಯಾವುದೇ ರೀತಿಯ ಅಗೌರವವಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಸಹಾಯಕ ಆಯುಕ್ತ ರಾಚಪ್ಪ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.